ಚಿಕ್ಕಬಳ್ಳಾಪುರ: ಶಾಲಾ ಆವರಣದಲ್ಲಿ ಬಾಲಕಿಗೆ ಕೆಲ ಬಾಲಕರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಲೈಂಗಿಕ ಕಿರುಕುಳ ನೀಡಿರುವ ಘಟನೆ ಬಗ್ಗೆ ತಿಳಿದ ಪೋಷಕರು ಪೊಲೀಸ್ ಠಾಣೆಯ ಮೊರೆ ಹೋಗಿದ್ದಾರೆ. ಶಾಲಾ ಆವರಣಕ್ಕೆ ಪೊಲೀಸರು ಭೇಟಿ ನೀಡಿ ಬಾಲಕರನ್ನು ಪರಿಶೀಲನೆ ನಡೆಸಿ ದೂರು ದಾಖಲಾಸಿದ್ದಾರೆ.
ಈ ಘಟನೆ ಕುರಿತು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.