ಚಿಕ್ಕಬಳ್ಳಾಪುರ: ಎಬಿವಿಪಿ ಸಂಘಟನೆಯ ಹೆಣ್ಣು ಮಕ್ಕಳ ಆತ್ಮರಕ್ಷಣೆ ಕಾರ್ಯಕ್ರಮಕ್ಕೆ ಚಿಂತಾಮಣಿ ತಾಲೂಕಿನ ಎಲ್ಲಾ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗುವಂತೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಸಚಿವರು ನೀಡಿರುವ ಆದೇಶ ಖಂಡನೀಯ ಎಂದು ಎಸ್ಎಫ್ಐ ಕಾರ್ಯಕರ್ತರು ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯ ಅಧ್ಯಕ್ಷ ಅಂಬರೀಶ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಆಡಳಿತ ಅಧಿಕಾರಿಗಳು ಸಂಘಟನೆಗಳ ಏಜೆಂಟ್‌ಗಳಿಗೆ ಕೆಲಸ ಮಾಡುತ್ತಿದ್ದಾರೆ. ಕೋಮುವಾದಿ ಎಬಿವಿಪಿ ಸಂಘಟನೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ವಿದ್ಯಾರ್ಥಿಗಳು ಹಾಜರಾಗಬೇಕೆಂದು ಆದೇಶ ಮಾಡಿರುವುದು ಖಂಡನೀಯ ಎಂದು ಕಿಡಿಕಾರಿದರು.