ಚಿಕ್ಕಬಳ್ಳಾಪುರ: ಗೌರಿಬಿದನೂರು ಮಾರ್ಗ ಹಾಗೂ ಚಿಕ್ಕಬಳ್ಳಾಪುರದಿಂದ ಪುಟ್ಟಪರ್ತಿ ಮಾರ್ಗದ ರೈಲ್ವೆ ಕಾಮಾಗಾರಿಯನ್ನ ತ್ವರಿತವಾಗಿ ಮುಗಿಸುವಂತೆ ಶಾಸಕ ಶಿವಶಂಕರ್ ರೆಡ್ಡಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವರಾದ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ, ಗೌರಿಬಿದನೂರು ನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ, ಚಿಕ್ಕಬಳ್ಳಾಪುರ-ಗೌರಿಬಿದನೂರು ರೈಲು ಮಾರ್ಗ ನಿರ್ಮಾಣ ಹಾಗೂ ಚಿಕ್ಕಬಳ್ಳಾಪುರ-ಪುಟ್ಟಪರ್ತಿ ಮಾರ್ಗದ ಕುರಿತು ಚರ್ಚಿಸಿ, ಆದಷ್ಟು ಬೇಗ ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.
ಈ ಹಿಂದೆ ಸಾಕಷ್ಟು ಬಾರಿ ಬಜೆಟ್ ಸಂದರ್ಭದಲ್ಲಿ ಈ ಭಾಗಗಳಲ್ಲಿ ರೈಲ್ವೆ ಮಾರ್ಗಗಳನ್ನು ತರುವುದಾಗಿ ಅನೇಕ ಜನನಾಯಕರು ಭರವಸೆ ನೀಡಿದ್ದರು. ಸದ್ಯ, ಅದರಂತೆ ಗೌರಿಬಿದನೂರು ಶಾಸಕ ಶಿವಶಂಕರ್ ರೆಡ್ಡಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.