ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಎಎಸ್ಐ ನಾರಾಯಣಸ್ವಾಮಿ ಅವರ ಮನೆಗೆ ನುಗ್ಗಿ ಶೂಟೌಟ್ ಮಾಡಿ, ದರೋಡೆ ನಡೆಸಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಡೆಸಿ ಜಾರ್ಖಂಡ್ನಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೈದರ್, ಆರಿಫ್, ಹ್ಯಾರಿಸ್ ಖಾನ್, ಜಮ್ ಶೀರ್ ಹಾಗೂ ವೀರ್ ಸಿಂಗ್ ಬಂಧಿತ ಆರೋಪಿಗಳಾಗಿದ್ದಾರೆ. ಸಿನಿಮೀಯ ರೀತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ದೆಹಲಿ, ಡೆಹ್ರಾಡೂನ್, ಜಾರ್ಖಂಡ್ನಲ್ಲಿ ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ.
ಬಂಧಿತರಿಂದ 3 ನಾಡಬಂದೂಕು, ಒಂದು ಪಿಸ್ತೂಲ್, 46 ಜೀವಂತ ಬುಲೆಟ್ಗಳು, 12.41 ಲಕ್ಷ ರೂಪಾಯಿ ಹಣ, 3.5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ. ಒಂದು ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳು, ಒಂದು ಕಾರನ್ನು ಜಪ್ತಿ ಮಾಡಿದ್ದಾರೆ. ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಸ್ವತಃ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಮಾಧ್ಯಮಗೋಷ್ಟಿಯಲ್ಲಿ ನಡೆಸಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ವಿವಿಧ ಅಪರಾಧ ಕೃತ್ಯಗಳಲ್ಲಿ 16 ಮಂದಿ ಬಂಧನ, 64 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ