ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸರಳವಾಗಿ ಶಿಕ್ಷಕರ ದಿನಾಚರಣೆ ಆಚರಣೆ

ಚಿಕ್ಕಬಳ್ಳಾಪುರ ಜಿಲ್ಲೆಯ ತಾಲೂಕುಗಳಲ್ಲಿ ಸರಳವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

Chikkaballapura
Chikkaballapura
author img

By

Published : Sep 5, 2020, 4:48 PM IST

ಚಿಕ್ಕಬಳ್ಳಾಪುರ: ಕೊರೊನಾ ವೈರಸ್​ ಕಾರಣ ಶಿಕ್ಷಕರ ದಿನಾಚರಣೆಯನ್ನು ಜಿಲ್ಲೆಯಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು.

ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲು ಎಲ್ಲಾ ತಾಲೂಕುಗಳು ನಿರ್ಧರಿಸಿರುವ ಕಾರಣ, ಸರ್ವಪಲ್ಲಿ ರಾಧಕೃಷ್ಣನ್ ಭಾವಚಿತ್ರಕ್ಕೆ ಹೂಗಳನ್ನು ಸಮರ್ಪಿಸಿ ಆಚರಣೆ ಮಾಡಲಾಯಿತು.

Chikkaballapura

ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದ್ದು, ತಿದ್ದಿ ತೀಡುವ ಅವಶ್ಯಕತೆ ಹೆಚ್ಚಾಗಿದೆ. ಅದೇ ರೀತಿ ಈ ವರ್ಷ ಜಿಲ್ಲೆಯೂ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು, ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್​​ ಹಾಗೂ ಥರ್ಮಲ್ ತಪಾಸಣೆ ಮಾಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಜಿಲ್ಲೆಯ ಚಿಕ್ಕಬಳ್ಳಾಪುರ, ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ ತಾಲೂಕು ವ್ಯಾಪ್ತಿಯಲ್ಲಿಯೂ ಸರಳವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.