ಚಿಕ್ಕಬಳ್ಳಾಪುರ : ರಸ್ತೆದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿಯ ರಾಷ್ಟೀಯ ಹೆದ್ದಾರಿ 7ರ ಬಳಿ ನಡೆದಿದೆ.
ಕಿರಣ್ (13) ಮೃತ ಬಾಲಕ. ಅತ್ತೆ ಮಾವ ಅಜ್ಜಿ ಜೊತೆಯೊಂದಿಗೆ ದೀಪಾವಳಿ ಆಚರಿಸಲು ಬಂದಿದ್ದ ಬಾಲಕ ರಸ್ತೆ ದಾಟುವಾಗ ವೇಗವಾಗಿ ಬರುತ್ತಿದ್ದ ಕಾರು ನೋಡದೆ ರಸ್ತೆ ದಾಟಲು ಮುಂದಾಗಿದ್ದಾನೆ. ಇದರಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತಕ್ಕೆ ಕಾರಣವಾದ ಕಾರನ್ನ ಗುಡಿಬಂಡೆ ಪೊಲೀಸರು ವಶಕ್ಕೆ ಪಡೆದಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.