ಚಿಂತಾಮಣಿ (ಚಿಕ್ಕಬಳ್ಳಾಪುರ) : ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಮುಂಬೈನ ದಾದರ್‌ನಲ್ಲಿರುವ ರಾಜಗೃಹದ ಮನೆಗೆ ನುಗ್ಗಿ ದಾಂಧಲೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ, ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಿಜೆಪಿ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ನಂತರ, ಪರಾಮರ್ಶೆಯ ಹೆಸರಿನಲ್ಲಿ ಸಂವಿಧಾನವನ್ನು ಬದಲಿಸುವ ಸಂಚು ನಡೆಯುತ್ತಿದೆ.
ಅಂಬೇಡ್ಕರ್ ಸಂವಿಧಾನ ಬರೆದಿಲ್ಲ, ಸಂವಿಧಾನವನ್ನು ಬದಲಿಸುವುದಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವರೊಬ್ಬರು ಬಹಿರಂಗವಾಗಿ ಘೋಷಣೆ ನೀಡಿದ್ದರು. ಆದ್ರೂ ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರ ಯಾವುದೇ ಕ್ರಮಕೈಗೊಳ್ಳಲಿಲ್ಲ ಎಂದು ಟೀಕಿಸಿದರು.