ETV Bharat / state

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ ಪ್ರಕರಣ: ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ತಪಾಸಣೆ

ಶ್ರೀಲಂಕಾದ‌ ಕೊಲೊಂಬೋದಲ್ಲಿ ಸರಣಿ ಬಾಂಬ್ ಸ್ಫೋಟ ಹಿನ್ನೆಲೆ‌ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಪೊಲೀಸರಿಂದ ತಪಾಸಣೆ- ಧಾರ್ಮಿಕ ಸ್ಥಳಗಳಿಗೆ ಆಗಮಿಸುವ-ನಿರ್ಗಮಿಸುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ

author img

By

Published : Apr 28, 2019, 9:24 PM IST

ಚಿಕ್ಕಬಳ್ಳಾಪುರದಲ್ಲಿ ಪೊಲೀಸರ ತಪಾಸಣೆ

ಚಿಕ್ಕಬಳ್ಳಾಪುರ: ಶ್ರೀಲಂಕಾದ‌ ಕೊಲೊಂಬೋದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ ಹಿನ್ನೆಲೆ‌ ಜಿಲ್ಲೆಯಾದ್ಯಂತ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕೆಂದು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ತಗೆದುಕೊಂಡಿದೆ.

ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಲ್ಲಾ ಠಾಣೆಗಳಲ್ಲಿಯೂ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸದ್ಯ ಈ ನಿಟ್ಟಿನಲ್ಲಿ ಧಾರ್ಮಿಕ ಸ್ಥಳಗಳಿಗೆ ಬರುವ ಪ್ರತಿಯೊಬ್ಬರಿಗೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಪೊಲೀಸರ ತಪಾಸಣೆ

ತಪಾಸಣೆ ಮಾಡಲು ಮೆಟಲ್ ಡಿಟೆಕ್ಟಿವ್‌ ಬಳಸಲಾಗುತ್ತಿದ್ದು, ಧಾರ್ಮಿಕ ಸ್ಥಳಗಳಿಗೆ ಆಗಮಿಸುವ-ನಿರ್ಗಮಿಸುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜೊತೆಗೆ ಸ್ಥಳೀಯ ಧಾರ್ಮಿಕ ಕೇಂದ್ರಗಳಲ್ಲಿ‌ ಅಧಿಕಾರಿಗಳ ಸಭೆಗಳನ್ನು ನಡೆಸಿ, ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಠಾಣೆಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು. ಇನ್ನು ಉದ್ಯೋಗಕ್ಕೆ ಬರುವ ಹೊಸಬರ ಪೂರ್ವಾಪರ ತಿಳಿದು ದಾಖಲೆಗಳನ್ನು ಪರಿಶೀಲಿಸಿದ ನಂತರವೇ ನೇಮಕ ಮಾಡಿಕೊಳ್ಳಬೇಕು. ಅಲ್ಲದೆ, ಮನೆ, ಕಚೇರಿ, ಲಾಡ್ಜ್​ಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

Intro:ಶ್ರೀಲಂಕಾದ‌ ಕೊಲೊಂಬೋದಲ್ಲಿ ಸರಣಿ ಬಾಂಬ್ ಸ್ಪೋಟ ಹಿನ್ನೆಲೆ‌ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಹಾಗೂ ಶಾಂತಿ ಸುವ್ಯಸ್ಥೆಯನ್ನು ಕಾಪಾಡಲು ಸಾರ್ವಜನಿಕರು ಸಹಕರಿಸಬೆಕೆಂದು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮವನ್ನು ತಗೆದುಕೊಂಡಿದೆ.

Body:ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಎಲ್ಲಾ ಠಾಣೆಗಳಲ್ಲಿಯೂ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.ಸದ್ಯ ಇದರ ನಿಟ್ಟಿನಲ್ಲಿ ಧಾರ್ಮಿಕ ಸ್ಥಳಗಳಿಗೆ ಬರುವ ಪ್ರತಿಯೊಬ್ಬರಿಗೂ ಪೊಲೀಸ್ ಅಧಿಕಾರಿಗಳು ತಪಾಸಣೆ ಶುರುಮಾಡಿದ್ದಾರೆ.

ತಪಾಸಣೆ ಮಾಡಲು ಮೆಟಲ್ ಡಿಟೆಕ್ಟಿವ್‌ ಬಳಸಲಾಗುತ್ತಿದ್ದು ಧಾರ್ಮಿಕ ಸ್ಥಳಗಳಿಗೆ ಆಗಮಿಸು ನಿರ್ಗಮಿಸುವ ಸ್ಥಳಗಳಲ್ಲಿ ಸಿ ಸಿ ಟಿ ವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ಜೊತೆಗೆ ಸ್ಥಳೀಯ ಧಾರ್ಮಿಕ ಕೇಂದ್ರಗಳಲ್ಲಿ‌ ಅಧಿಕಾರಿಗಳ ಸಭೆಗಳನ್ನು ನಡೆಸಿ ಸಂಶಾಯಾಸ್ಪದ ವ್ಯಕ್ಯಿಗಳು ಕಂಡುಬಂದಲ್ಲಿ ಕೂಡಲೆ ಸಂಭದಿಸಿದ ಠಾಣೆಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು.
ಇನ್ನೂ ಉದ್ಯೋಗಕ್ಕೆ ಬರುವ ಹೊಸಬರನ್ನು ಪರಿಶೀಲನೆ ನಡೆಸಿ ದಾಖಲೆಗಳನ್ನು ನೋಡಿ ನಂತರ ನೇಮಕ ಮಾಡಿಕೊಳ್ಳುವಂತೆ ತಿಳಿಸಿದರು.ಮನೆ ಕಛೇರಿ ಲಾಡ್ಜ್ ಗಳಲ್ಲಿ ಸಿಸಿ ಕ್ಯಾಮರ ಅಳವಡಿಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.