ETV Bharat / state

ಪೋಷಕರು ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು.. ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಎಸ್​ಎಸ್​ಎಲ್​ಸಿ ಪರೀಕ್ಷೆ ಹತ್ತಿರ ಬರುತ್ತಿದೆ ಈಗಿನಿಂದಲೇ ಚೆನ್ನಾಗಿ ಓದು ಎಂದು ತಾಯಿ ಮಗಳಿಗೆ ಹೇಳಿದ್ದೇ ತಪ್ಪಾಯ್ತು..!

SSLC student commits suicide in Chikkaballapura
ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಆತ್ಮಹತ್ಯೆ
author img

By

Published : Jul 28, 2023, 8:29 PM IST

ಚಿಕ್ಕಬಳ್ಳಾಪುರ: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಚೆನ್ನಾಗಿ ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ. ನಗರದ ಸುಮಂಗಲಿ ಬಡಾವಣೆಯ ನಿವಾಸಿ ವಿಂಧ್ಯಾಶ್ರೀ ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ತಡರಾತ್ರಿಯವರೆಗೂ ಆಟವಾಡುತ್ತಿದ್ದ ಹಿನ್ನೆಲೆ ತಾಯಿ ಎಸ್ಎಸ್ಎಲ್ಸಿ ಪರೀಕ್ಷೆ ಬರುತ್ತಿರುವುದರಿಂದ ಉತ್ತಮ ವಿದ್ಯಾಭ್ಯಾಸ ಮಾಡಬೇಕು. ಈಗಿನಿಂದಲೇ ಹೆಚ್ಚು ಓದುವಂತೆ ಸೂಚಿಸಿದ್ದರು. ಇದೇ ವಿಚಾರವನ್ನು ಗಂಭೀರವಾಗಿ ತಗೆದುಕೊಂಡ ವಿದ್ಯಾರ್ಥಿನಿ ವಿಂಧ್ಯಾಶ್ರೀ, ನಗರದ ಬೈಪಾಸ್​ ಬಳಿ ಇರುವ ಉತ್ತರ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನು ವಿಂಧ್ಯಾಶ್ರೀ ನಗರದ ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದಳು. ಅದೇ ಶಾಲೆಯಲ್ಲಿ ತಾಯಿಯೂ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಓದುವಂತೆ ಸೂಚಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಪೋಷಕರಲ್ಲಿ ಸಾಕಷ್ಟು ಆತಂಕ ಮೂಡಿಸಿದೆ. ಬುದ್ಧಿವಾದ ಹೇಳಿದ ಬಳಿಕ ಮಗಳು ಕಾಣದೇ ಇರುವುದನ್ನು ಗಮನಿಸಿದ ವಿಂಧ್ಯಾಶ್ರೀ ಪೋಷಕರು ನಗರದ ಹಲವೆಡೆ ಸಾಕಷ್ಟು ಹುಡುಕಾಟ ನಡೆಸಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಂದು ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸ್ನಾನ ಗೃಹದಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಮೂಲ್ಯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೃತ ವಿದ್ಯಾರ್ಥಿನಿ ಮೂಲತಃ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರ್ವೆ ಗ್ರಾಮದವಳಾಗಿದ್ದು, ಇಂದು ಬೆಳಗ್ಗೆ ವಿದ್ಯಾರ್ಥಿನಿಯರು ಸ್ನಾನಗೃಹಕ್ಕೆ ತೆರಳಿದಾಗ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.

ಕೂಡಲೇ ಹಾಸ್ಟೆಲ್ ಸಿಬ್ಬಂದಿಗೆ ವಿದ್ಯಾರ್ಥಿಗಳು ವಿಚಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 11.30 ಗಂಟೆಯವರೆಗೆ ತನ್ನ ಸಹ ಪಾಠಿಗಳೊಂದಿಗೆ ಓದುತ್ತಿದ್ದ ಅಮೂಲ್ಯ ನಂತರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಕೊಪ್ಪ ಸರ್ಕಾರಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೊಪ್ಪ ಪೊಲೀಸರು ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಮಾಡೆಲ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.