ETV Bharat / state

ಆಂಜನೇಯ ರೆಡ್ಡಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಚಿವ ಸುಧಾಕರ್​ಗೆ ಜಾಮೀನು - ಈಟಿವಿ ಭಾರತ ಕನ್ನಡ

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ 25 ಸಾವಿರ ಬಾಂಡ್ ಠೇವಣಿ‌ ಕಟ್ಟಿಸಿಕೊಂಡು ಮಾನ್ಯ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

statement-against-anjaneya-reddy-bail-granted-to-minister-dr-k-sudhakar
ಆಂಜನೇಯ ರೆಡ್ಡಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸಚಿವ ಡಾ.ಕೆ.ಸುಧಾಕರ್​ಗೆ ಜಾಮೀನು
author img

By

Published : Dec 8, 2022, 8:32 PM IST

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿರುದ್ದ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆ ವಿರುದ್ಧ ನ್ಯಾಯಾಲಯ ಇಂದು‌ ತೀರ್ಪು ನೀಡಿದ್ದು 25 ಸಾವಿರ ಬಾಂಡ್ ಠೇವಣಿ‌ ಕಟ್ಟಿಸಿಕೊಂಡು ಜಾಮೀನು ಮಂಜೂರು ಮಾಡಿದೆ.

ಆಂಜನೇಯ ರೆಡ್ಡಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಸುಧಾಕರ್ ವಿರುದ್ದ ಹೂಡಿದ್ದ ಮಾನನಷ್ಟ ಮೊಕದ್ದಮೆ ಅಂಗೀಕರಿಸಿದ್ದ ವಿಶೇಷ ನ್ಯಾಯಾಲಯ ಕ್ರಿಮಿನಲ್ ಕೇಸ್ ದಾಖಲಿಸಿ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಹಾಕಿದ್ದ ಸಚಿವರು ಕೋರ್ಟ್​ಗೆ ಖುದ್ದು ಹಾಜರಾಗಿದ್ದರು. ಇದೀಗ ನ್ಯಾಯಾಲಯವು ವೈಯುಕ್ತಿಕ ಬಾಂಡ್ ಮತ್ತು 25,000 ಠೇವಣಿ ಕಟ್ಟಿಸಿಕೊಂಡು ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಗೆ ಡಿ.09 ರಂದು ದಿನಾಂಕ ನಿಗದಿಪಡಿಸಿದೆ.

ಸಚಿವರನ್ನು ಸಮ್ಮಿಶ್ರ ಸರ್ಕಾರದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರಾಗಿ ನೇಮಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಉಚ್ಚನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದ ಆಂಜನೇಯರೆಡ್ಡಿ ವಿರುದ್ಧ "ಕಳ್ಳಬಟ್ಟಿ ಕುಡಿಸಿ, ರೈತರನ್ನು ಸಾಯಿಸಿ ಜೈಲಿಗೆ ಹೋಗಿ ಬಂದ ನಕಲಿ ನೀರಾವರಿ ಹೋರಾಟಗಾರ ನನ್ನ ವಿರುದ್ಧ ಕಾನೂನು ಹೋರಾಟ ಮಾಡುತ್ತಿದ್ದಾನೆ" ಎಂದು ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ: ನ್ಯಾಯದಾನ ವ್ಯವಸ್ಥೆಯಲ್ಲಿ ಮಾನವೀಯ ಮೌಲ್ಯಗಳಿಗೆ ಹೆಚ್ಚು ಆದ್ಯತೆ : ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.