ETV Bharat / state

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ - Stone Laid program by MLAs for various development

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಇಂದು ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಕಾರ್ಯಕ್ರಮ ನಡೆದಿದ್ದು, ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಈ ಗುದ್ದಲಿ ಪೂಜೆ ಕಾರ್ಯ ನೆರವೇರಿಸಿದರು.

Stone Laid program
ಶಾಸಕರಿಂದ ಗುದ್ದಲಿ ಪೂಜೆ ಕಾರ್ಯಕ್ರಮ
author img

By

Published : Aug 5, 2020, 8:16 PM IST

ಚಿಕ್ಕಬಳ್ಳಾಪುರ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಂತಾಮಣಿ ಶಾಸಕರಾದ ಜೆ.ಕೆ.ಕೃಷ್ಣಾರೆಡ್ಡಿ ಇಂದು ಗುದ್ದಲಿ ಪೂಜೆ ನೆರವೇರಿಸಿ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು.

ತಾಲೂಕಿನ ಆನೂರು ಗ್ರಾಮದಲ್ಲಿ ಮುಖ್ಯಮಂತ್ರಿ ಮಾದರಿ ಗ್ರಾಮ ವಿಕಾಸ ಯೋಜನೆಯಡಿ 50 ಲಕ್ಷ ರೂಪಾಯಿಗಳ ವಿವಿಧ ಮೂಲಭೂತ ಕಾಮಗಾರಿಗಳು, ಮುತ್ತುಕದಹಳ್ಳಿ ಗ್ರಾಮದಲ್ಲಿ 3 ಲಕ್ಷ ವೆಚ್ಚದಲ್ಲಿ ದುರಸ್ತಿಗೊಂಡಿರುವ ಚಾವಡಿ ಕಟ್ಟಡ ಹಾಗೂ ಮಹಿಳಾ ಸ್ತ್ರೀಶಕ್ತಿ ಸಂಘದವರಿಗೆ ಕಟ್ಟಡದ ಹಸ್ತಾಂತರ, 2017-18 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ತಳವಾರ ಗ್ರಾಮ ಪಂಚಾಯಿತಿಯ ಅಟ್ಟೂರು ಗ್ರಾಮದಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನದ ನಿರ್ಮಾಣ ಕಾರ್ಯಗಳಿಗೆ ಶಾಸಕರು ಗುದ್ದಲಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು.

ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ 2019-20 ನೇ ಸಾಲಿನ ಅಲೆಮಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಜಂಗಮಶೀಗೆಹಳ್ಳಿ ಗ್ರಾಮದಲ್ಲಿ ಅಂದಾಜು 5 ಲಕ್ಷಗಳಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಎಂ.ಗೊಲ್ಲಹಳ್ಳಿ ಪಂಚಾಯಿತಿಯ ಮುಂಗಾನಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂಪಾಯಿಗಳ ವಿವಿಧ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಹಾಗೂ 2019-20 ನೇ ಸಾಲಿನಲ್ಲಿ ನಬಾರ್ಡ್ ಸಹಯೋಗದ ಐಆರ್​ಡಿಎಫ್-25 ರ ಯೋಜನೆಯಲ್ಲಿ ಚಿಂತಾಮಣಿ ನಗರದ ವೆಂಕಟಗಿರಿ ಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯ 9 ಲಕ್ಷ ರೂಪಾಯಿ ವೆಚ್ಚದ ಕೊಠಡಿ ನಿರ್ಮಾಣ ಕಾಮಗಾರಿಗಳಿಗೂ ಸಹ ಶಾಸಕರು ಗುದ್ದಲಿ ಪೂಜೆ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.