ETV Bharat / state

ಚಿಕ್ಕಬಳ್ಳಾಪುರ; ಕಾಲೇಜಿಗೆ ಹೋಗುವುದಾಗಿ ಹೇಳಿ ವಿದ್ಯಾರ್ಥಿ ಆತ್ಮಹತ್ಯೆ - ಆತ್ಮಹತ್ಯೆ

ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

student-committs-suicide-in-chikkaballapur
ವಿದ್ಯಾರ್ಥಿ ಆತ್ಮಹತ್ಯೆ
author img

By ETV Bharat Karnataka Team

Published : Jan 10, 2024, 4:47 PM IST

Updated : Jan 10, 2024, 7:31 PM IST

ಚಿಕ್ಕಬಳ್ಳಾಪುರ: ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಮೃತನನ್ನು ಮುರುಗಮಲ್ಲ ಹೋಬಳಿಯ ಚಲಮಕೋಟೆ ಗ್ರಾಮದ ಮೋಹನ ಎಂ ಎನ್ (22) ಎಂದು ಗುರುತಿಸಲಾಗಿದೆ.

ಮೃತ ಮೋಹನ್​ ನಗರದ ಖಾಸಗಿ ಕಾಲೇಜೊಂದರಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ಬೆಳಗ್ಗೆ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದ. ಬಳಿಕ ಸಂಜೆ 5 ಗಂಟೆಗೆ ಮನೆಗೆ ಕರೆ ಮಾಡಿ, ನನ್ನ ಸ್ನೇಹಿತನ ಹುಟ್ಟುಹಬ್ಬ ಇದೆ. ಬರುವುದು ಸ್ವಲ್ಪ ತಡವಾಗುತ್ತದೆ ಎಂದು ಹೇಳಿದ್ದ. ನಂತರ ಈತನ ಫೋನ್ ಸ್ವಿಚ್ಡ್​​ ಆಫ್ ಆಗಿತ್ತು. ನಂತರ ಬುಧವಾರ ಬೆಳಗ್ಗೆ ಬಂಗಾರಪೇಟೆ ರೈಲ್ವೆ ಪೊಲೀಸರು ರೈಲ್ವೆ ಹಳಿಯಲ್ಲಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ಆತನ ಸಂಬಂಧಿಕರಿಗೆ ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಬಂಗಾರಪೇಟೆ ರೈಲ್ವೆ ಮತ್ತು ಗ್ರಾಮಾಂತರ ರಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೊಡಗು ಮೂಲದ ವಿದ್ಯಾರ್ಥಿ ಆತ್ಮಹತ್ಯೆ : ಮತ್ತೊಂದು ಪ್ರಕರಣದಲ್ಲಿ ಕೊಡಗು ಮೂಲದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ಸಂಜೆ ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯ ಚಿಕ್ಕ ಬಿದರಕಲ್ಲು ಎಂಬಲ್ಲಿ ನಡೆದಿತ್ತು. ವಿಶು ಉತ್ತಪ್ಪ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿಶು ಉತ್ತಪ್ಪ ಆರ್ ಆರ್ ಕಾಲೇಜಿನಲ್ಲಿ ಮೊದಲನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ. ಆತನ ತಂದೆ ಖಾಸಗಿ ನೈಸ್ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ಸಂಜೆ 4:30ರ ಸುಮಾರಿಗೆ ಮನೆಯಲ್ಲಿ ಯಾರೂ ಇರದಿದ್ದಾಗ ವಿಶು ಆತ್ಮಹತ್ಯೆ ಮಾಡಿಕೊಂಡಿದ್ದ. ತಂದೆ ಡಿ ಡಿ ತಮ್ಮಯ್ಯ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿತ್ತು.

ತಕ್ಷಣ ಮಗನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವಿಶು ಉತ್ತಪ್ಪ ಸಾವನ್ನಪ್ಪಿದ್ದ. ಈ ಸಂಬಂಧ ಪೀಣ್ಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ : ದೊಡ್ಡಬಳ್ಳಾಪುರ: "ಬುಜ್ಜಿ ಐ ಮಿಸ್ ಯೂ.." ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Last Updated : Jan 10, 2024, 7:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.