ETV Bharat / state

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು - ಎಸ್ಎಸ್ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿಯೊಬ್ಬ ನೀರುಪಾಲಾಗಿದ್ದಾನೆ.

chikkaballapur
ಅಜಯ್ ಕುಮಾರ್​​ ಮೃತ ವಿದ್ಯಾರ್ಥಿ
author img

By

Published : May 29, 2022, 9:06 AM IST

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿ ನೀರುಪಾಲಾದ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಕೆರೆಯಲ್ಲಿ ನಡೆದಿದೆ. ಪಸುಪಲೋಡು ಗ್ರಾಮದ ಅಜಯ್ ಕುಮಾರ್​​ ಮೃತ ವಿದ್ಯಾರ್ಥಿ.

ಅಜಯ್ ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ. ಎಂದಿನಂತೆ ನಿನ್ನೆ (ಶನಿವಾರ) ಶಾಲೆ ಮುಗಿಸಿಕೊಂಡು ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿ ನೀರಿನಲ್ಲಿ ಸಿಲುಕಿಕೊಂಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಜಯ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

chikkaballapur
ವಿದ್ಯಾರ್ಥಿ ಅಜಯ್ ಕುಮಾರ್​​ ಮೃತದೇಹ

ಅಜಯ್ ಚಿಕ್ಕ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡಿದ್ದ. ತಾಯಿ ಶಾರದಮ್ಮಗೆ ಒಬ್ಬನೇ ಮಗ. ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ‌.

ಇದನ್ನೂ ಓದಿ: ಗುದನಾಳದಲ್ಲಿ 24 ಕ್ಯಾರೆಟ್ ಚಿನ್ನ ಬಚ್ಚಿಟ್ಟು ಸಾಗಿಸುತ್ತಿದ್ದವ ಕಸ್ಟಮ್ಸ್ ವಶಕ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.