ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನಲ್ಲಿ ಕಾಯಿಲೆಗಳಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ವಿಮೆ ಚೆಕ್‌ಗಳನ್ನು ಬಾಗೇಪಲ್ಲಿ ಪಟ್ಟಣದ ಹಾಲು ಉತ್ಪಾದಕರ ಸಂಘದ ವತಿಯಿಂದ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಜೀವನಕ್ಕೆ ಆಧಾರವಾಗಿರುವ ಪಶು ಸಂಗೋಪನೆ ಬಗ್ಗೆ ಹೆಚ್ಚಿನ ಅರಿವು ಪಡೆಯಬೇಕು. ರಾಸುಗಳಿಗೆ ಬರಬಹುದಾದ ಕಾಯಿಲೆಗಳ ಬಗ್ಗೆ ಅರಿವಿದ್ದರೆ ಮುಂಜಾಗೃತ ಕ್ರಮಗಳನ್ನು ತಿಳಿದುಕೊಳ್ಳಬಹುದು. ಹಾಲು ಒಕ್ಕೂಟದ ಶಿಬಿರದ ಅಧಿಕಾರಿಗಳು ಆ ನಿಟ್ಟಿನಲ್ಲಿ ಹಾಲು ಉತ್ಪಾದಕರಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡಬೇಕು ಎಂದರು.