ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು 8 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಲನಚಿತ್ರ ಹಾಗೂ ರಂಗಭೂಮಿ ಕಲಾವಿದರಾದ ಶ್ರೀಮತಿ ವಿ. ಯಶೋಧಮ್ಮ ಚಾಲನೆ ನೀಡಿದ್ರು.
ಶಿಡ್ಲಘಟ್ಟ ನಗರ ವಾಸವಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರಧ್ವಜಾರೋಹಣ ತಹಶಿಲ್ದಾರ್ ದಯಾನಂದ ಅವರು ನೆರವೇರಿಸಿದರು. ನಾಡಧ್ವಜರೋಹಣವನ್ನು ಕಾರ್ಯ ನಿರ್ವಹಣಾಧಿಕಾರಿ ಬಿ ಶಿವಕುಮಾರ್ ನೇರವೆರಿಸಿದರು. ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಶಿಡ್ಲಘಟ್ಟ ಬಸ್ ನಿಲ್ದಾಣದಿಂದ ಅಶೋಕ್ ರಸ್ತೆ ವಾಸವಿ ಕಲ್ಯಾಣ ಮಂಟಪದವರೆಗೆ ಸಾಗಿತು.
ನಂತರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮೊದಲಿಗೆ ಪ್ರಾರ್ಥನೆ, ನಾಡಗೀತೆಯನ್ನು ಡಿ.ಎಂ ಮಹೇಶ್ ಕುಮಾರ್ ಮತ್ತು ತಂಡದವರು ನಡೆಸಿಕೊಟ್ಟರು. ರೈತ ಗೀತೆಯನ್ನು ನಟರಾಜ್ ಮತ್ತು ತಂಡ ಹಾಡಿದರು. ನಗರದ ಪ್ರಮುಖ ಬೀದಿಗಳಲ್ಲಿ ಡೊಳ್ಳುಕುಣಿತ, ವೀರಗಾಸೆ, ಕೋಲಾಟ, ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಗಮನ ಸೆಳೆದವು.