ಚಿಕ್ಕಬಳ್ಳಾಪುರ: ಜೀವನದಲ್ಲಿ ಜಿಗುಪ್ಸೆಗೊಳಗಾಗಿ ಶಿಕ್ಷಕಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಕರೇಕಲ್ಲಹಳ್ಳಿಯಲ್ಲಿ ನಡೆದಿದೆ.
ಜ್ಯೋತಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಪಟ್ಟಣದ ಕರೇಕಲ್ಲಹಳ್ಳಿಯಲ್ಲಿರುವ ತನ್ನ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ತಾಯಿಯಾಗಿರುವ ಇವರು ಪಟ್ಟಣದ ಪ್ರತಿಷ್ಠಿತ ವಿದ್ಯಾನಿಧಿ ಶಾಲೆಯಲ್ಲಿ ಕಳೆದೆರಡು ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇನ್ನು ಘಟನಾ ಸ್ಥಳಕ್ಕೆ ಸಿಪಿಐ ರವಿ ಹಾಗೂ ಪಿಎಸ್ಐ ಅವಿನಾಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.