ETV Bharat / state

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ: ಗುಡಿಸಲುಗಳು ಬೆಂಕಿಗಾಹುತಿ

ಶಿಡ್ಲಘಟ್ಟ ತಾಲೂಕಿನ ಸಡ್ಲವಾರಹಳ್ಳಿ ಗ್ರಾಮದಲ್ಲಿ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಗುಡಿಸಲುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಮಾನವೀಯವಾಗಿ ವರ್ತಿಸಿದ್ದಾರೆ.

ಗುಡಿಸಲುಗಳು ಬೆಂಕಿಗಾಹುತಿ
ಶಿಡ್ಲಘಟ್ಟ ತಾಲೂಕಿನ ಸಡ್ಲವಾರಹಳ್ಳಿ ಗ್ರಾಮದಲ್ಲಿ ಗುಡಿಸಲುಗಳು ಬೆಂಕಿಗಾಹುತಿ
author img

By

Published : Jan 18, 2021, 7:08 PM IST

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಗುಡಿಸಲಿಗೆ ಬೆಂಕಿಯಿಟ್ಟ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಡ್ಲವಾರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿಡ್ಲಘಟ್ಟ ತಾಲೂಕಿನ ಸಡ್ಲವಾರಹಳ್ಳಿ ಗ್ರಾಮದಲ್ಲಿ ಗುಡಿಸಲುಗಳು ಬೆಂಕಿಗಾಹುತಿ

ಇತ್ತೀಚೆಗಷ್ಟೇ ನಡೆದ ಗ್ರಾಮ ಪಂಚಾಯತ್​ ಚುನಾವಣೆಯ ಫಲಿತಾಂಶದ ನಂತರ ಗ್ರಾಮದ ನಾಗ ಭೂಷಣಪ್ಪ, ನವೀನ್, ನರಸಿಂಹಮೂರ್ತಿ, ರಮೇಶ್, ಅಶೋಕ್ ಎಂಬುವರ ನಡುವೆ ದ್ವೇಷ ಹುಟ್ಟಿಕೊಂಡಿತ್ತು. ಇಂದು ಮಾತಿಗೆ ಮಾತು ಬೆಳೆದು ಎರಡು ಗುಂಪಿನವರು ದೊಣ್ಣೆ, ರಾಡ್​ಗಳಿಂದ ಬಡಿದಾಡಿಕೊಂಡು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಲಾಟೆ ವೇಳೆ ಗುಡಿಸಲುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಮಾನವೀಯವಾಗಿ ವರ್ತಿಸಿದ್ದಾರೆ.

ಇನ್ನು ಗುಡಿಸಲುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಈ ಸಂಬಂಧ ದಿಬ್ಬುರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.