ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಬಸ್ನಿಂದ ಬಿದ್ದು ವಿದ್ಯಾರ್ಥಿವೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.
ನಾರಾಯಣ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ, ನಲ್ಲಗುಟ್ಲಹಳ್ಳಿ ಗ್ರಾಮದ ಪ್ರದೀಪ್ (18) ಬಸ್ನಿಂದ ಬಿದ್ದು ಸಾವನ್ನಪ್ಪಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಚಿಂತಾಮಣಿ ನಗರದ ವಿನೋಭ ಕಾಲೋನಿಯ ಪಕ್ಕದಲ್ಲಿ ಅಪಘಾತ ನಡೆದಿದ್ದು, ಬಸ್ಸಿನ ಅತಿ ವೇಗವೇ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ. ಈ ಸಂಬಂಧ ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.