ETV Bharat / state

ಬಾಗೇಪಲ್ಲಿಯಲ್ಲಿ ಈಜಲು ಹೋಗಿದ್ದ ನಾಲ್ವರು ನಾಪತ್ತೆ: ಇಬ್ಬರ ಮೃತದೇಹ ಪತ್ತೆ!

ಕೆರೆಯಲ್ಲಿ ಈಜಾಡಲು ಹೋದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಜರುಗಿದೆ.

author img

By

Published : Nov 4, 2020, 5:21 PM IST

Updated : Nov 4, 2020, 8:14 PM IST

ಬಾಗೇಪಲ್ಲಿಯಲ್ಲಿ ಈಜಲು ಹೋಗಿದ್ದ ನಾಲ್ವರು ಹುಡುಗರು ನಾಪತ್ತೆ

ಬಾಗೇಪಲ್ಲಿ: ಕೆರೆಯಲ್ಲಿ ಈಜಾಡಲು ಹೋದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಜ್ವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

ಆಂದ್ರಪ್ರದೇಶ ಮೂಲದ ಬದ್ರಿನಾಥ್ ಹಾಗೂ ವರುಣ್ ಎಂಬಾತನ ಮೃತ ದೇಹಗಳು ಪತ್ತೆಯಾಗಿದ್ದು, ಸಂತೋಷ್ ಮತ್ತು ಮಹೇಶ್ ಎಂಬುವವರು ನಾಪತ್ತೆಯಾಗಿದ್ದಾರೆ. ಅವರನ್ನು ಪತ್ತೆ ಮಾಡುವ ಕಾರ್ಯದಲ್ಲಿ ಅಗ್ನಿ ಶಾಮಕದಳ ಸಿಬ್ಬಂದಿ ಮತ್ತು ಪೋಲೀಸ್ ಇಲಾಖೆಯ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ.

ನಾಲ್ವರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಾಡಲು ತೆರಳಿದ್ದು ಬಹುಶಃ ಈಜು ಬಾರದೆ ಅಥವಾ ಕೆರೆ ಆಳವಾಗಿರುವ ಹಿನ್ನೆಲೆಯಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿದೆ. ಈಗಾಗಲೇ ಇಬ್ಬರು ವಿದ್ಯಾರ್ಥಿಗಳ ಮೃತ ದೇಹಗಳು ಪತ್ತೆ ಆಗಿದ್ದು ನಾಪತ್ತೆ ಆಗಿರುವ ವಿದ್ಯಾರ್ಥಿಗಳನ್ನು ಪತ್ತೆಹಚ್ಚಲು ಜಂಟಿ ಕಾರ್ಯಾಚರಣೆ ನಡೆಯುತ್ತಿದೆ.

ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Nov 4, 2020, 8:14 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.