ETV Bharat / state

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಪತ್ನಿಯನ್ನೇ ಕೊಂದವ ಆತ್ಮಹತ್ಯೆಗೆ ಶರಣು! - ಪತ್ನಿ ಕೊಂದ ಗಂಡನೂ ಆತ್ಮಹತ್ಯೆ

ಮೂರು ದಿನಗಳ ಹಿಂದೆಯಷ್ಟೇ ಮದ್ಯ ಸೇವನೆಗೆ ಹಣ ನೀಡದ ಪತ್ನಿ ರತ್ನಮ್ಮ(35)ಳನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದ ಪತಿಯೂ ಇದೀಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Chikkaballapur
ಪತ್ನಿ ಕೊಂದವ ಆತ್ಮಹತ್ಯೆ
author img

By

Published : Nov 25, 2020, 7:52 PM IST

ಚಿಕ್ಕಬಳ್ಳಾಪುರ: ಮದ್ಯ ಸೇವನೆ ಮಾಡಲು 500 ರೂ. ಕೊಡಲಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆದಿನಾರಾಯಣಪ್ಪ ಆತ್ಮಹತ್ಯೆಗೆ ಶರಣಾದವ ಎನ್ನಲಾಗಿದೆ. ಈತ ಮೂರು ದಿನಗಳ ಹಿಂದೆಯಷ್ಟೇ ಪತ್ನಿ ರತ್ನಮ್ಮ(35)ಳನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದ. ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಇದೀಗ ತಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತಕ್ಕೋ ಏನೋ ಕೆರೆಗೆ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶವ ಕೆರೆಯಲ್ಲಿ ತೇಲಿ ಬರುತ್ತಿರುವುದನ್ನು ನೋಡಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಕೆರೆಯಿಂದ ಶವವನ್ನು ಮೇಲಕ್ಕೆತ್ತಿದ್ದಾರೆ. ನಂತರ ಸಂಬಂಧಿಕರಿಗೆ ಒಪ್ಪಿಸಿದ್ದಾರೆ.

ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯನ್ನು ಹೊಡೆದು ಕೊಂದ ಪಾಪಿ ಪತಿ

ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಮೂರು ದಿನಗಳ ಹಿಂದೆ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನಂತೆ. ಮಧ್ಯಾಹ್ನದ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ಕೊಟ್ಟಿದ್ದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ದಂಪತಿಗೆ ಮೂರು ಮಕ್ಕಳು ಇದ್ದು, ಇದೀಗ ಅವು ಅನಾಥವಾಗಿವೆ.

ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.