ETV Bharat / state

ಕಾಲೇಜಿಗೆ ಚಕ್ಕರ್, ತಾಲೂಕು ಕಚೇರಿಗೆ ಹಾಜರ್ : ಸರ್ಕಾರಿ ಕೆಲಸಕ್ಕೆ ವಿದ್ಯಾರ್ಥಿಗಳ ಬಳಕೆ - The use of students for government work

ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಆನ್​ಲೈನ್​ನಲ್ಲಿ ತಿದ್ದುಪಡಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ಹಣ ಕೊಡುತ್ತಿದ್ದಾರೆ. ಹಣದ ಆಸೆಯಿಂದಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಚಕ್ಕರ್ ಹೊಡೆದು, ತಾಲೂಕು ಕಚೇರಿಗೆ ಹಾಜರಾಗುತ್ತಿದ್ದಾರೆ.

ವಿದ್ಯಾರ್ಥಿಗಳ ಬಳಕೆ
author img

By

Published : Oct 10, 2019, 10:28 AM IST

ಚಿಕ್ಕಬಳ್ಳಾಪುರ: ಸರ್ಕಾರಿ ಅಧಿಕಾರಿಗಳು ತಾವು ಮಾಡಬೇಕಾಗಿದ್ದ ಕೆಲಸವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಒಪ್ಪಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಕಚೇರಿ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆಯ ಕೆಲಸವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಒಪ್ಪಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಆನ್​ಲೈನ್​ನಲ್ಲಿ ತಿದ್ದುಪಡಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ಹಣ ಕೊಡುತ್ತಿದ್ದಾರೆ. ಹಣದ ಆಸೆಯಿಂದಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಚಕ್ಕರ್ ಹೊಡೆದು, ತಾಲೂಕು ಕಚೇರಿಗೆ ಹಾಜರಾಗುತ್ತಿದ್ದಾರೆ. ಇದೇ ತಿಂಗಳ 15 ರ ಒಳಗೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದು ಇರುವುದರಿಂದ ಅಧಿಕಾರಿಗಳು ಈ ಕೆಲಸ ಮಾಡಿಸುತಿದ್ದಾರೆ.

ವಿದ್ಯಾರ್ಥಿಗಳ ಬಳಕೆ

ಗುಡಿಬಂಡೆಯಂತಹ ಹಿಂದುಳಿದ ತಾಲೂಕಿನಲ್ಲಿ ಮಕ್ಕಳನ್ನು ಓದಲು ಕಳಿಸುವುದೇ ಹೆಚ್ಚು. ಹೀಗಿರುವಾಗ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲು ಬಳಸಿಕೊಳ್ಳುತ್ತಿರುವುದು ನಿಜಕ್ಕೂ ದುರಂತ. ಹೆತ್ತವರು ಅದೆಷ್ಟೋ ಕನಸುಗಳನ್ನು ಕಟ್ಟಿಕೊಂಡು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳಿಸುತ್ತಾರೆ. ಆದರೆ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳನ್ನು ರಜೆ ಹಾಕಿಸಿ, ತಮ್ಮ ಕೆಲಸಗಳಿಗೆ ಬಳಸಿಕೊಳ್ಳುತ್ತಿರುವುದು ಎಷ್ಟು ಸರಿಯೆಂಬುದೇ ಪ್ರಶ್ನೆಯಾಗಿದೆ.

Intro:ಮತದಾರರ ಪಟ್ಟಿ ಪರಿಷ್ಕರಣೆಗೆ ಕಾಲೇಜು ವಿದ್ಯಾರ್ಥಿಗಳ ಬಳಕೆ Body:ಮತದಾರರ ಪಟ್ಟಿಯನ್ನು ಪರಿಷ್ಕರಣೆಗೆ ವಿದ್ಯಾರ್ಥಿಗಳು ಕಾಲೇಜಿಗೆ ಚಕ್ಕರ್ ಕಚೇರಿಗೆ ಹಾಜರ್ Conclusion:ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಕಚೇರಿ ಅಧಿಕಾರಿಗಳು ಮಾಡಬೇಕಾದ ಕೆಲಸವನ್ನು ವಿದ್ಯಾರ್ಥಿಗಳು ಮಾಡುತ್ತಿದ್ದಾರೆ ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಆನ್ ಲೈನ್ ನಲ್ಲಿ ತಿದ್ದುಪಡಿ ಮಾಡಿದವರಿಗೆ ವಿದ್ಯಾರ್ಥಿಗಳಿಗೆ ಹಣ ಕೊಡುತ್ತಿದ್ದಾರೆ

ಹಿಂದುಳಿದ ತಾಲೂಕಿನಲ್ಲಿ ಮಕ್ಕಳನ್ನು ಓದಲು ಕಲಿಸುವುದೇ ಹೆಚ್ಚು ಅದರಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಹೋಗದೆ ತಾಲೂಕು ಕಚೇರಿಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲು ಅಧಿಕಾರಿಗಳು ಬಳಕೆ ಮಾಡುತ್ತಿದ್ದಾರೆ. ಇದೆ ತಿಂಗಳು 15 ರ ಒಳಗೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು
ಅಧಿಕಾರಿಗಳು ದುಡ್ಡು ಕೊಟ್ಟು ಕಾಲೇಜು ವಿದ್ಯಾರ್ಥಿಗಳನ್ನು ಕಚೇರಿಯಲ್ಲಿ ಕೆಲಸ ಮಾಡಿಸುತ್ತಿದ್ದಾರೆ

ಗುಡಿಬಂಡೆ ತಾಲೂಕು ರೈತರು ಎಷ್ಟೋ ಕನಸು ಕಂಡು ಕಾಲೇಜಿಗೆ ಕಲಿಸುತ್ತಿದ್ದಾರೆ ಆದರೇ ಅಧಿಕಾರಿಗಳು ಮಾಡುವ ತಪ್ಪಿನಿಂದ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳನ್ನು ರಜೆ ಹಾಕಿಸಿ ಆನಲೈನ್ ಮೂಲಕ ಪರಿಷ್ಕರಣೆ ಮಾಡುಸುತ್ತಿದ್ದಾರೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.