ಚಿಕ್ಕಬಳ್ಳಾಪುರ(ಬಾಗೇಪಲ್ಲಿ): ತಾಲೂಕಿನಾದ್ಯಂತ ಕಳ್ಳರ ಹಾವಳಿ ಜೋರಾಗಿದೆ. ಆಭರಣ ಅಂಗಡಿಯೊಂದಕ್ಕೆ ನುಗ್ಗಿದ್ದ ಖತರ್ನಾಕ್ ಕಳ್ಳ ನೋಡ ನೋಡುತ್ತಿದ್ದಂತೆ ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ಬಾಗೇಪಲ್ಲಿಯಲ್ಲಿ ಶನಿವಾರ ನಡೆದಿದೆ.
ಬಾಗೇಪಲ್ಲಿ ಪಟ್ಟಣದ ಆಭರಣ ಅಂಗಡಿಗೆ ಬಂಗಾರ ಖರೀದಿಸಲು ಮಹಿಳೆಯರು ಜಮಾಯಿಸಿದ್ದರು. ಈ ವೇಳೆ ಕಳ್ಳ ತನ್ನ ಕೈಚಳಕ ತೋರಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಕುರಿತು ಬಾಗೇಪಲ್ಲಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.