ಚಿಕ್ಕಬಳ್ಳಾಪುರ: ಆಸ್ಪತ್ರೆ ಆವರಣದಲ್ಲಿ ಪಾರ್ಕ್ ಮಾಡಲಾಗಿದ್ದ ಬೈಕ್ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.
ಜೈ ಪ್ರಕಾಶ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದ್ದು, ಇವರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಸುತ್ತಿದ್ದಾರೆ. ಎಂದಿನಂತೆ ರಾತ್ರಿ ತಮ್ಮ ದ್ವಿಚಕ್ರವಾಹನವನ್ನು ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಿದ್ದಾರೆ. ಈ ಅವಕಾಶವನ್ನೇ ಹೊಂಚು ಹಾಕಿ ಕಾಯುತ್ತಿದ್ದ ಖದೀಮನೊಬ್ಬ ಬೈಕ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಈ ದೃಶ್ಯ ಆಸ್ಪತ್ರೆಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.