ಚಿಕ್ಕಬಳ್ಳಾಪುರ: ಚಿತ್ರವತಿ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಬೇರೆ ಬೇರೆ ಕಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.
ಪೂರ್ವಜರ ಕಾಲದಿಂದ ರಥೋತ್ಸವ ನಡೆಯುತ್ತಿದೆ. ಇಲ್ಲಿಗೆ ಬರುವಂತ ಭಕ್ತರಿಗೆ ಬೆಳಗ್ಗೆ 6 ರಿಂದ ಸಂಜೆ 8 ರ ವರೆಗೆ ಸರಿಸುಮಾರು 30 ರಿಂದ 40 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಗ್ರಾಮ ಪಂಚಾಯ್ತಿ ಸದಸ್ಯರು ತಿಳಿಸಿದರು.