ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆಯ ಎದುರೇ ಕಾಂಗ್ರೆಸ್ ಮುಖಂಡನನ್ನು ಮಾರಕಾಸ್ತ್ರಗಳಿಂದ ಬರ್ಬರ ಕೊಲೆ ಮಾಡಿದ ಹಿಂದೆ ಇಬ್ಬರ ಕೈವಾಡವಿದೆ ಎಂದು ಜಿಲ್ಲಾವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಹಾಡಹಗಲೇ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಮುಂಭಾಗ ಕಾಂಗ್ರೆಸ್ ಮುಖಂಡ ಅಮ್ಜದ್ ನವಾಸ್ ದ್ವಿಚಕ್ರ ವಾಹನದಲ್ಲಿ ಹೋಗುವ ವೇಳೆ ಓಮಿನಿ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿ ಪರಾರಿಯಾಗಲು ಯತ್ನಿಸಿದ್ದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ಆರೋಪಿಗಳನ್ನು ಹಿಡಿಯಲು ಯತ್ನಿಸಿದ ಪೊಲೀಸ್ ಸಿಬ್ಬಂದಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ.
ಈಗಾಗಲೇ ಎಲ್ಲಾ ಮಾಹಿತಿ ಕಲೆ ಹಾಕಲಾಗುತ್ತಿದ್ದು ಮೂರು ಸುಳಿವುಗಳು ಸಿಕ್ಕಿವೆ ಅದರ ಪ್ರಕಾರ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾವರಿಷ್ಠಾಧಿಕಾರಿ ಸ್ಪಷ್ಟಪಡಿಸಿದರು.
ಇದನ್ನು ಓದಿ:ಶಿಡ್ಲಘಟ್ಟ ಠಾಣೆಯ ಮುಂಭಾಗದಲ್ಲಿಯೇ ಹರಿಯಿತು ನೆತ್ತರು: ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ!