ಚಿಕ್ಕಬಳ್ಳಾಪುರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇಂದು ಬೆಳಗಿನ ವರದಿಯಲ್ಲಿ 4 ಮಂದಿ ಸೋಂಕಿತರು ಪತ್ತೆಯಾಗಿದ್ದು, ಜಿಲ್ಲಾಡಳಿಕ್ಕೆ ಮತ್ತೆ ದೊಡ್ಡ ಕಂಟಕ ಶುರುವಾಗಿದೆ. ಪಿ-790ರ ಸಂಪರ್ಕದಲ್ಲಿದ್ದ 17 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ. 68 ವರ್ಷದ ವ್ಯಕ್ತಿ ಹಾಗೂ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಗೂ ಸೋಂಕು ಇರುವುದು ದೃಢಪಟ್ಟಿದೆ.
ಸೋಂಕಿತರಿಗೆ ಜಿಲ್ಲೆಯ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ.