ಚಿಕ್ಕಬಳ್ಳಾಪುರ: ರೈತರು ಆಧುನಿಕ ಯಂತ್ರೋಪಕರಣಗಳನ್ನು ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಂಡಲ್ಲಿ ಉತ್ತಮ ಇಳುವರಿ ಪಡೆಯಬಹುದು ಎಂದು ಬೆಂಗಳೂರಿನ ತೋಟಗಾರಿಕಾ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ.ವಿಷ್ಣುವರ್ಧನ್ ಸಲಹೆ ನೀಡಿದರು.
ಗುಡಿಬಂಡೆ ತಾಲೂಕು ಪಂಚಾಯತ್ ಆವರಣದಲ್ಲಿ ತೋಟಗಾರಿಕೆ ಇಲಾಖೆ, ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆಲೂಗಡ್ಡೆ ಬೆಳೆಯ ಸುಧಾರಿತ ಬೇಸಾಯ ಕ್ರಮ ಹಾಗೂ ಆಲೂಗಡ್ಡೆ ಬೀಜ ಬಿತ್ತುವ ಯಂತ್ರದ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಇಂದಿನ ಯುಗದಲ್ಲಿ ಹಳೆಯ ಬೇಸಾಯ ಕ್ರಮಗಳನ್ನು ಅಳವಡಿಸಿ ಬೆಳೆ ಬೆಳೆಯುತ್ತಿದ್ದಾರೆ. ಈಗಾಗಲೇ ಕೃಷಿ ಚಟುವಟಿಕೆಗಳಿಗಾಗಿ ನೂತನ ಯಂತ್ರೋಪಕರಣಗಳ ಆವಿಷ್ಕಾರಗೊಂಡಿವೆ. ಅವುಗಳನ್ನು ಬಳಸಿ ಕೃಷಿಯಲ್ಲಿ ಅಳವಡಿಸಿಕೊಳ್ಳುವುದರಿಂದ ಸಮಯ ಉಳಿತಾಯದ ಜತೆಗೆ ಉತ್ತಮ ಇಳುವರಿ ಸಹ ಪಡೆಯಬಹುದಾಗಿದೆ ಎಂದರು.