ETV Bharat / state

ಮೀನಿಗೆ ಬಲೆ ಹಾಕಿದಂತೆ ಕುತಂತ್ರದಿಂದ ನನ್ನನ್ನು ಬಂಧಿಸಿದ್ದರು.. ಗಾಲಿ ಜನಾರ್ದನ ರೆಡ್ಡಿ

ಬಾಗೇಪಲ್ಲಿಯಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರ ಸಮಾವೇಶ-ರಾಜಕೀಯದಿಂದ 12 ವರ್ಷಗಳು ದೂರ ಉಳಿಯ ಬೇಕಾಯಿತು. ಮತ್ತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೂಲಕ ರಾಜಕೀಯಕ್ಕೆ ಮರು ಪ್ರವೇಶ ಮಾಡಿದ್ದೇನೆ- ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿಕೆ.

Tribute to Janardhana Reddy
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಮಾವೇಶದಲ್ಲಿ ಜನಾರ್ದನ ರೆಡ್ಡಿಗೆ ಸನ್ಮಾನ
author img

By

Published : Mar 12, 2023, 9:59 PM IST

ಚಿಕ್ಕಬಳ್ಳಾಪುರ: ನದಿಯಲ್ಲಿ ಸ್ವತಂತ್ರವಾಗಿ ಈಜಾಡುತ್ತಿದ್ದ ಮೀನಿಗೆ ಬಲೆ ಹಾಕಿದಂತೆ, ಕೆಲವರು ನನ್ನ ವಿರುದ್ಧ ಕುತಂತ್ರಗಳನ್ನು ನಡೆಸಿ ಬಂಧಿಸಿದ್ದರು ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ವಿಧಾನಸಭಾ ಕ್ಷೇತ್ರ ಬಾಗೇಪಲ್ಲಿಯಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಇವತ್ತಿನ ರಾಜಕೀಯ ಅಂದರೇನು ತಂತ್ರ, ಕುತಂತ್ರ, ಸುಳ್ಳು, ಮೋಸ, ವಂಚನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದರಿಂದ ನಾನು ರಾಜಕೀಯದಿಂದ 12 ವರ್ಷಗಳು ದೂರ ಉಳಿಯಬೇಕಾಯಿತು. ಆದರೆ ಮತ್ತೆ ನಾನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೂಲಕ ರಾಜಕೀಯಕ್ಕೆ ಮರು ಪ್ರವೇಶ ಮಾಡಿದ್ದೇನೆ. ಏಕೆಂದರೆ ಬದುಕಿದರೆ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ. ಎಸ್ ರಾಜಶೇಖರರೆಡ್ಡಿ ಅವರ ರೀತಿಯಲ್ಲಿ ಬದುಕಬೇಕು. ಜನರಿಗಾಗಿ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.

ಅದೇ ರೀತಿ ತಮಿಳುನಾಡಿನ ಜಯಲಲಿತಾ ಎಂಬ ಹೆಣ್ಣು ಮಗಳಂತೆ ಸಾವಿರ ವರ್ಷಗಳು ಕಳೆದರೂ ಹೆಸರು ಉಳಿಯುವಂತೆ ಮಾಡಬೇಕು. ಹಾಗಾಗಿ ನಾನು ಮತ್ತೆ ರಾಜಕೀಯಕ್ಕೆ ಬಂದಿದ್ದೇನೆ. ಆ ನಿಟ್ಟಿನಲ್ಲಿ ಕಾರ್ಯಗತನಾಗಿದ್ದೇನೆ ಎಂದು ಜನಾರ್ದನ್​ ತಿಳಿಸಿದರು.

ರಾಜ್ಯದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಾಳಿಯೂ ಬೀಸಿದ್ದು, ಜನರಲ್ಲಿ ಅದು ಭರವಸೆ ಮೂಡಿಸುತ್ತಿದೆ. ಸತ್ಯವಾಗಿ ಹೇಳ್ತಿನಿ.. ಕಲ್ಯಾಣ ರಾಜ್ಯ ಪ್ರಗತಿ ಪಕ್ಷವೂ ಈ ಬಾರಿ ರಾಜ್ಯದಲ್ಲಿ ಸುಮಾರು 30 ರಿಂದ 40 ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಮುಂದೆ ಬರುವ ಚುನಾವಣೆಯಲ್ಲಿ ವಿಧಾನಸಭೆ ಬಾಗೇಪಲ್ಲಿ ಕ್ಷೇತ್ರದ ಅಭ್ಯರ್ಥಿಯಾಗಿ ಅರಿಕೆರೆ ಕೃಷ್ಣಾರೆಡ್ಡಿ ಅವರನ್ನೂ ಘೋಷಣೆ ಮಾಡುತ್ತಿದ್ದೇನೆ. ಬಾಗೇಪಲ್ಲಿ ಕ್ಷೇತ್ರದ ಅಭಿವೃದ್ಧಿಯಾಗಬೇಕಾಗಿದೆ. ಗ್ರಾಮಗಳು ಅಭಿವೃದ್ಧಿಯಿಂದ ಮರೀಚಿಕೆ ಆಗಿವೆ. ಮೂಲ ಸೌಲಭ್ಯಗಳ ಅವ್ಯವಸ್ಥೆಯಿಂದ ಜನರು ಬೇಸತ್ತಿದ್ದಾರೆ. ಬಾಗೇಪಲ್ಲಿ ಅಭಿವೃದ್ಧಿಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗೆ ತಾವೆಲ್ಲರೂ ಆಶೀರ್ವಾದ ಮಾಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಅರಿಕೆರೆ ಕೃಷ್ಣಾರೆಡ್ಡಿ, ಯುವ ಮುಖಂಡ ನಾರಾಯಣಸ್ವಾಮಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಜನಾರ್ದನ ರೆಡ್ಡಿ ಆಸ್ತಿ ವಿವರ ಕೋರಿದ ಸಿಬಿಐ ವಿಶೇಷ ನ್ಯಾಯಾಲಯ

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ವಿವಿಧ ದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ ಎನ್ನಲಾದ ಆರೋಪ ಸಂಬಂಧದ ಬಂಡವಾಳವನ್ನು ಪತ್ತೆ ಹಚ್ಚಲು ತನಿಖಾ ಸಂಸ್ಥೆಗೆ ಸಹಾಯ ಮಾಡುವಂತೆ ವಿವಿಧ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ಮನವಿ ಮಾಡಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಇ. ಇಂದ್ರಕಲಾ ಅವರು ಸ್ವಿಡ್ಜರ್ಲೆಂಡ್, ಸಿಂಗಾಪುರ, ಯುಎಇ ಮತ್ತು ಐಲ್ ಆಫ್ ಮ್ಯಾನ್ ದೇಶಗಳ ನ್ಯಾಯಾಂಗ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ಕೋರಿದ್ದಾರೆ. ಆರೋಪಿಗೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್ 166(ಎ) ಪ್ರಕಾರ ಮನವಿ ಮಾಡುತ್ತಿದ್ದು, ಈ ಪ್ರಕರಣದಲ್ಲಿ ತನಿಖೆಗೆ ಸಹಕಾರ ನೀಡುವುದಕ್ಕಾಗಿ ಕೋರುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.

ಸಿಬಿಐ ತನಿಖಾಧಿಕಾರಿಗಳು ಜಿಎಲ್‌ಎ (ಗಾಲಿ ಜನಾರ್ದನ ರೆಡ್ಡಿ) ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೆಟ್ ಲಿಮಿಟೆಡ್‌ನ ಸಂಯೋಜನೆ ವಿವರಗಳಂತಹ ಮಾಹಿತಿಯನ್ನು ಸಂಗ್ರಹಿಸಲು ನ್ಯಾಯಾಂಗದ ಸಹಾಯವನ್ನು ಕೋರಿದೆ. ಈ ನಿಟ್ಟಿನಲ್ಲಿ ಮನವಿ ಮಾಡಲಾಗುತ್ತಿದೆ ಎಂದು ನ್ಯಾಯಾಧೀಶರು ಕೋರಿದ್ದಾರೆ. ಜಿಎಲ್‌ಎ ಕಂಪನಿಯ ಸ್ವರೂಪ, ಬ್ಯಾಂಕ್ ಖಾತೆಗೆ ಸಂಬಂಧಿಸಿದ ವಿವರ, ಮಾಲೀಕರು ಮತ್ತು ಅಧಿಕೃತವಾಗಿ ಸಹಿ ಹಾಕಿರುವ ವ್ಯಕ್ತಿಯ ವಿವರ, ಅದರ ಮುಂದಿನ ಫಲಾನುಭವಿಗಳು, ಕಂಪೆನಿಯ ಷೇರುಗಳ ವಿವರ, ಅದನ್ನು ಖರೀದಿ ಮಾಡಿರುವವರು ಮತ್ತು ಮಾರಾಟ ಮಾಡಿರುವವರು, ಕಂಪೆನಿಯ ನಿರ್ದೇಶಕರು ಮತ್ತು ಷೇರುದಾರರ ವಿವರ ಸೇರಿದಂತೆ ಲಭ್ಯವಿರುವ ಎಲ್ಲ ಮಾಹಿತಿಯನ್ನು ಒದಗಿಸುವಂತೆ ಕೋರ್ಟ್ ಕೇಳಿದೆ.

ಇದನ್ನೂಓದಿ:ಒಂದು ಜೋಳಿಗೆಗೆ ನೋಟು ಇನ್ನೊಂದು ಜೋಳಿಗೆಗೆ ವೋಟು.. ಮತದಾರರ ಮುಂದೆ ಹೊರಟ ಬಿಜೆಪಿ ನಾಯಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.