ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಳೆಯ ನಡುವೆ ಅಕ್ರಮವಾಗಿ ಗಾಂಜಾ ಬೆಳೆದಿದ್ದ ತಾತ ಮತ್ತು ಮೊಮ್ಮಗನನ್ನು ಪೊಲೀಸರು ಬಂಧಿಸಿ, ಗಾಂಜಾ ಗಿಡಗಳನ್ನು ವಶಪಡಿಸಿಕೊಂಡ ಘಟನೆ ಚಿಂತಾಮಣಿ ತಾಲೂಕಿನ ದಿಗವದೇವಪಲ್ಲಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಈರಪ್ಪ (70) ಮತ್ತು ಮೊಮ್ಮಗ ಹರೀಶ್ ಬಂಧಿತ ಆರೋಪಿಗಳು. ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಿಗವದೇವಪಲ್ಲಿ ಗ್ರಾಮದಲ್ಲಿ ಟೊಮ್ಯಾಟೊ ಬೆಳೆ ನಡುವೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಪಾಪ್ಪಣ್ಣ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.
ಇನ್ನು ಬಂಧಿತರಿಂದ 22 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.