ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಹಳೆ ಊರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಹರಿ ಚರಣ್ ರೆಡ್ಡಿ (13) ಹಾಗೂ ಲಿಖಿತ್ (14) ಮೃತ ಬಾಲಕರು ಎಂದು ತಿಳಿದು ಬಂದಿದೆ. ಇಬ್ಬರೂ ಬಾಲಕರು 9ನೇ ತರಗತಿಯಲ್ಲಿ ಓದುತ್ತಿದ್ದರು.
ವಾಟದ ಹೊಸಳ್ಳಿ ಹೋಬಳಿಯ ಹಳೆ ಊರು ಗ್ರಾಮದ ಬಾಲಕರು ಮಧ್ಯಾಹ್ನ ಈಜಾಡಲು ಗ್ರಾಮದ ಹೊರ ವಲಯದ ಕೃಷಿ ಹೊಂಡಕ್ಕೆ ಹೋಗಿದ್ದು, ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಸ್ನೇಹಿತ ರಕ್ಷಿತ್ ಮನೆಯವರ ಜಮೀನಿನಲ್ಲಿ ಕೃಷಿ ಹೊಂಡವಿದ್ದು, ಮಧ್ಯಾಹ್ನ ಈಜಲು ಸ್ನೇಹಿತರೊಂದಿಗೆ ಹೋಗಿದ್ದರು. ಸಂಜೆಯಾದರೂ ಮಕ್ಕಳು ಮನೆಗೆ ಬಾರದ ಕಾರಣ ಪೋಷಕರು ಹುಡುಕಾಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಮೃತದೇಹಗಳನ್ನು ಕೃಷಿ ಹೊಂಡದಿಂದ ಮೇಲೆತ್ತಿದ್ದು, ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ ವಿಧಾನಮಂಡಲ ಅಧಿವೇಶನ ಅಗ್ನಿಪರೀಕ್ಷೆ: 10 ದಿನಗಳ ಕಲಾಪದಲ್ಲಿ ಏನಿರಲಿದೆ?