ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕು ತೊಂಡೇಬಾವಿ ಹೋಬಳಿಯ ಗ್ರಾಮವೊಂದರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದಾರುಣ ಸಾವನ್ನಪ್ಪಿದ್ದಾರೆ.
ಬಸ್ಗಳು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬಸ್ ಗುದ್ದಿದ ರಭಸಕ್ಕೆ ಬೈಕ್ ಸವಾರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕಮಲಾಪುರ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಬಸ್ ಬಿಟ್ಟು ಡ್ರೈವರ್ ಗಳು ಪರಾರಿಯಾಗಿದ್ದಾರೆ.
ಇನ್ನು ಎರಡು ಖಾಸಗಿ ಬಸ್ಗಳ ಅಡ್ಡಾದಿಡ್ಡಿ ಚಾಲನೆಗೆ ಬೈಕ್ ಸವಾರರು ಜೀವತೆತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.