ಚಿಕ್ಕಬಳ್ಳಾಪುರ: ರಾಜಸ್ಥಾನ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನು ಪೊಲೀಸರು ರೆಡ್ ಹ್ಯಾಂಡ್ ಹಿಡಿದು ಬಂಧಿಸಿರುವ ಘಟನೆ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ.
ರಾಜಸ್ಥಾನ ಮೂಲದ ರಾಣಾಸಿಂಗ್ ಹಾಗೂ ಜೋಗ್ ಸಿಂಗ್ ಬಂಧಿತರು. ಚಾಮರಾಜಪೇಟೆಯಲ್ಲಿ 2003 ರಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ಇಬ್ಬರು ವ್ಯಕ್ತಿಗಳು ನಗರದಲ್ಲಿ ಬಟ್ಟೆ ವ್ಯಾಪಾರ ಸೇರಿದಂತೆ ಪ್ಲಾಸ್ಟಿಕ್, ತಟ್ಟೆ ಪರಿಕರಗಳ ಅಂಗಡಿಯನ್ನು ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ಸಂಜೆಯಾಗುತ್ತಿದ್ದಂತೆ ಅಫೀಮು ಸೇವನೆ ಮಾಡುತ್ತಿದ್ದರು ಹಾಗೂ ತಮ್ಮ ಸಮುದಾಯದ ವ್ಯಕ್ತಿಗಳಿಗೆ ಹಾಗೂ ಪರಿಚಯಸ್ಥರಿಗೆ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು ಎನ್ನಲಾಗ್ತಿದೆ.
ಇದನ್ನೂ ಓದಿ: ಸಾರಾಯಿ ಕುಡಿಯಲು ಹಣ ಕೊಡದ್ದಕ್ಕೆ ಹೆತ್ತ ತಾಯಿಯನ್ನೇ ಹೊಡೆದು ಕೊಂದ ಪಾಪಿ ಪುತ್ರ!
ಆಫೀಮು ಸೇರಿದಂತೆ, ಡ್ರಗ್ಸ್ ಸಾಗಣೆ ಬಗ್ಗೆ ಖಚಿತ ಮಾಹಿತಿ ಪಡೆದು, ಚಿಕ್ಕಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿಶಂಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಗಳಿಂದ 3 ಲಕ್ಷ ರೂ. ಮೌಲ್ಯದ 388 ಗ್ರಾಂ ತೂಕದ ಆಫೀಮು ಹಾಗೂ ಬಳಕೆ ಮಾಡಲಾಗಿದ್ದ ಎರಡು ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.