ETV Bharat / state

ಚಿಕ್ಕಬಳ್ಳಾಪುರದಲ್ಲಿಂದು ಮತ್ತೆ ಇಬ್ಬರಲ್ಲಿ ಕೊರೊನಾ: ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ

author img

By

Published : Jun 25, 2020, 8:16 PM IST

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇದುವರೆಗೂ 182 ಜನರಿಗೆ ಸೋಂಕು ತಗುಲಿದ್ದು, ಇವರಲ್ಲಿ ಇಬ್ಬರು ಕೋವಿಡ್​​ -19ನಿಂದ ಸಾವನ್ನಪ್ಪಿದ್ದಾರೆ. 147 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್ 19 ಆಸ್ಪತ್ರೆ
ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್ 19 ಆಸ್ಪತ್ರೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆಯಾಗಿದೆ.

ಚಿಂತಾಮಣಿ ನಗರದ ಕನಂಪಲ್ಲಿ ಬಡಾವಣೆಯ ರೋಗಿ-10392, 30 ವರ್ಷದ ಯುವಕ ಮತ್ತು ಚಿಕ್ಕಬಳ್ಳಾಪುರ ನಗರದ ರೋಗಿ-10393, 9 ವರ್ಷದ ಬಾಲಕಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಚಿಂತಾಮಣಿಯ ಯುವಕನಿಗೆ ಬೆಂಗಳೂರು ಪ್ರವಾಸದ ಹಿನ್ನೆಲೆ ಸೋಂಕು ಹರಡಿದೆ. ಬೆಂಗಳೂರು ಪ್ರವಾಸದ ಹಿನ್ನೆಲೆ ಹೊಂದಿದ್ದ ರೋಗಿ-9915ರ 58 ವರ್ಷ ಪರುಷನ ಸಂಪರ್ಕದಿಂದ 9 ವರ್ಷದ ಬಾಲಕಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಇದುವರೆಗೂ 182 ಜನರಿಗೆ ಸೋಂಕು ತಗುಲಿದ್ದು, ಇವರಲ್ಲಿ ಇಬ್ಬರು ಕೋವಿಡ್-19ನಿಂದ ಸಾವನ್ನಪ್ಪಿದ್ದಾರೆ. ಇನ್ನೋರ್ವರು ಅನ್ಯ ಕಾರಣದಿಂದ ಸಾವಿಗೀಡಾಗಿದ್ದು, 147 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 32 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಐಸೋಲೇಷನ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.