ಚಿಕ್ಕಬಳ್ಳಾಪುರ: ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಮೃತ ದೇಹವನ್ನು 40 ವರ್ಷದ ವ್ಯಕ್ತಿ ಎಂದು ಗುರುತ್ತಿಸಲಾಗಿದ್ದು, ವ್ಯಕ್ತಿಯ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಕಳೆದ 3 - 4 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಕುರಿ ಮೇಯಿಸಲು ಹೊರಟಿದ್ದ ಕುರಿಗಾಯಿಯೊಬ್ಬ ಕೆರೆಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋದ ವೇಳೆ ಮೃತ ದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾನೆ.
ಸ್ಥಳಕ್ಕೆ ಮಂಚೇನಹಳ್ಳಿ ಪಿಎಸ್ಐ ಲಕ್ಷ್ಮಿನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.