ಚಿಕ್ಕಬಳ್ಳಾಪುರ: ತರಕಾರಿ ಸಾಗುಸಿತ್ತಿದ್ದ ಆಟೋವೊಂದಕ್ಕೆ ಅಪರಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ವರ್ಲಕೊಂಡ ಸಮೀಪ ರಾಷ್ಟ್ರೀಯ ಹೆದ್ದಾರಿ 7ರ ಬಳಿ ಈ ಅಪಘಾತ ನಡೆದಿದ್ದು, ಚಿಕ್ಕಬಳ್ಳಾಪುರದಿಂದ ಬಾಗೆಪಲ್ಲಿಗೆ ತರಕಾರಿ ಸಾಗಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ತರಕಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಶ್ರೀನಿವಾಸ (36) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.