ಚಿಕ್ಕಬಳ್ಳಾಪುರ: ಇಲ್ಲಿನ ಗೌರಿಬಿದನೂರು ತಾಲೂಕಿನ ಮಿನಿವಿಧಾನ ಸೌಧ ಹಿಂಭಾಗದಲ್ಲಿ ಅಪರಿಚಿತ ಮಹಿಳೆಯ ಶವ ಅರೆ ಬರೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶವದ ಬಳಿಕ ಮೊಬೈಲ್ ಸಹ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಮಹಿಳೆಯ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಸ್ಥಳಕ್ಕೆ ಮಂಚೇನಹಳ್ಳಿ ಪಿಎಸ್ಐ ಲಕ್ಷ್ಮಿನಾರಾಯಣ, ಸಿಪಿಐ ಶಶಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಓದಿ: ಪೊಲೀಸ್ ಪರೀಕ್ಷೆಯಲ್ಲಿ ನಕಲು ಮಾಡಲು ಪ್ಲಾನ್: ಮೂವರು ಅಭ್ಯರ್ಥಿಗಳು ಸೇರಿ 11 ಜನರ ಬಂಧನ