ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೆಚ್ ಕ್ರಾಸ್ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ.
ಶಿಡ್ಲಘಟ್ಟ ತಾಲೂಕಿನ ಹೆಚ್ ಕ್ರಾಸ್ ಬಳಿಯ ನೀಲಗಿರಿ ತೋಪಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸುಮಾರು 35 ವರ್ಷ ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಸ್ಥಳೀಯರಿಗೆ ವಿಪರೀತ ವಾಸನೆ ಬಂದಿದೆ. ಅನುಮಾನಗೊಂಡು ನೀಲಗಿರಿ ತೋಪಿನ ಬಳಿ ಬಂದು ನೋಡೊದಾಗ ಶವ ಪತ್ತೆಯಾಗಿದ್ದು, ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ಈ ಘಟನಾ ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.