ಚಿಕ್ಕಬಳ್ಳಾಪುರ: ವಾಲ್ಮೀಕಿ ಸಮುದಾಯದ ಕಾಮಗಾರಿ ವಿಳಂಬವಾಗಲು ಕಾರಣ ಏನು ಎಂದು ಶಾಸಕ ಕೃಷ್ಣಾರೆಡ್ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರವಾಸೋದ್ಯಮ ಸಚಿವರ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಳಂಭವಾಗಲು ಕಾರಣ ಏನು? ಎಷ್ಟು ಸಮಯ ಬೇಕು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಸದ್ಯ ಇದೇ ವಿಚಾರದ ಕುರಿತು ಸಭೆಯಲ್ಲಿ ಚಿಂತಾಮಣಿ ಕ್ಷೇತ್ರದ ಶಾಸಕ, ಅಧಿಕಾರಿಗಳಿಗೆ ಪ್ರಶ್ನೆ ಕೇಳಿ ಚಳಿ ಬಿಡಿಸಿದ್ದಾರೆ. ಹಣ ಬಿಡುಗಡೆಯಾದ್ರೂ ಇನ್ನೂ ಕಾಮಾಗಾರಿಗಳು ಮಾತ್ರ ಪೂರ್ಣಗೊಳ್ಳುತ್ತಿಲ್ಲ. ಇದಕ್ಕೆ ಕಾರಣವೇನೆಂದು ತರಾಟೆಗೆ ತೆಗೆದುಕೊಂಡಿದ್ದಾರೆ.