ಚಿಕ್ಕಬಳ್ಳಾಪುರ: ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ 5 ವೆಂಟಿಲೇಟರ್ಸ್ ಇದ್ದರೂ ಯಾವೊಂದು ಕೂಡಾ ಉಪಯೋಗಕ್ಕೆ ಬಾರದೆ ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂಬ ಮಾಹಿತಿ ಗೊತ್ತಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟವಾದ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ: ಆಕ್ಸಿಜನ್ ಕೊರತೆ: ಅಫಜಲಪುರ ತಾಲೂಕು ಆಸ್ಪತ್ರೆಯಲ್ಲೂ ನಾಲ್ವರು ರೋಗಿಗಳು ಸಾವು!
ಐದು ವೆಂಟಿಲೇಟರ್‌ಗಳಿದ್ದರೂ ಆಪರೇಟರ್ ಇಲ್ಲದೇ ವ್ಯರ್ಥವಾಗುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ಸೋಂಕಿತರನ್ನು ವೈದ್ಯರು ಮಾತ್ರ ಜಿಲ್ಲಾಸ್ಪತ್ರೆಗೆ ರವಾನೆ ಮಾಡುತ್ತಿದ್ದು, ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದುಬ ತಿಳಿದು ಬಂದಿದೆ.