ETV Bharat / state

ಬಿಜೆಪಿ ಸರ್ಕಾರದಲ್ಲಿ ಸಿಎಂ ಮತ್ತು ಸಚಿವರೊಂದಿಗೆ ಹೊಂದಾಣಿಕೆಯಿಲ್ಲ: ಬಸವರಾಜ್ ಹೊರಟ್ಟಿ

ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಸಿಎಂ ಮತ್ತು ಸಚಿವರೊಂದಿಗೆ ಹೊಂದಾಣಿಕೆ ಇಲ್ಲ. ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಖಾಸಗಿ ಶಾಲಾ ಶಿಕ್ಷಕರು ಬೀದಿ ಪಾಲಾಗಿದ್ದಾರೆ ಎಂದು ಬಸವರಾಜ್ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

Basavaraj horatti
ಬಸವರಾಜ್ ಹೊರಟ್ಟಿ
author img

By

Published : Oct 24, 2020, 7:25 PM IST

ಚಿಕ್ಕಬಳ್ಳಾಪುರ: ಬಿಜೆಪಿ ಸರ್ಕಾರದಲ್ಲಿ ಸಿಎಂ ಮತ್ತು ಸಚಿವರೊಂದಿಗೆ ಯಾವುದೇ ಹೊಂದಾಣಿಕೆಯಿಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು.

ಜೆಡಿಎಸ್ ಪಕ್ಷದ ಅಭ್ಯರ್ಥಿ ತೂಪಲ್ಲಿ ಚೌಡರೆಡ್ಡಿ ಪರ ಮತಯಾಚನೆ ನಡೆಸಿದ ವೇಳೆ ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಬಸವರಾಜ್ ಹೊರಟ್ಟಿ, ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಸಿಎಂ ಮತ್ತು ಸಚಿವರೊಂದಿಗೆ ಹೊಂದಾಣಿಕೆ ಇಲ್ಲ. ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಖಾಸಗಿ ಶಾಲಾ ಶಿಕ್ಷಕರು ಬೀದಿ ಪಾಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ

ನವೆಂಬರ್ 17 ರಂದು ಶಾಲಾ-ಕಾಲೇಜು ಪ್ರಾರಂಭ ಮಾಡುತ್ತಿರುವುದು ಸ್ವಾಗತಾರ್ಹ. ಆದರೆ ಕೋವಿಡ್ ನಿಯಮಾವಳಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತಂದು ಕಾಲೇಜು ಪ್ರಾರಂಭಿಸಬೇಕು ಎಂದು ಸಲಹೆ ನೀಡಿದರು. ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್​​ನಿಂದ ಶಿಕ್ಷಣ ಇಲಾಖೆಯ 2 ಸಾವಿರಕ್ಕೂ ಅಧಿಕ ಮಂದಿ‌ ಬಳಲುತ್ತಿದ್ದು 24ಕ್ಕೂ ಹೆಚ್ಚು ಶಿಕ್ಷಕರು ಮೃತಪಟ್ಟಿರುವುದು ಇದಕ್ಕೆ ಉದಾಹರಣೆಯಾಗಿದೆ. ಈ ಎಲ್ಲಾ ಸಮಸ್ಯೆ ನಿವಾರಿಸಲು ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡರು

ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೌಟುಂಬಿಕ ಸಮಸ್ಯೆಯಿಂದ ಬಳುತ್ತಿದ್ದಾರೆ. ಚುನಾವಣೆ ಎದುರಿಸಲು ಸಾಧ್ಯವಾಗುತ್ತಿಲ್ಲ, ಹಾಗಾಗಿ ಪಕ್ಷೇತರ ಅಭ್ಯರ್ಥಿ ಬಸವರಾಜ್ ಗುರಿಕಾರ್​ಗೆ ಬೆಂಬಲ ಕೊಡಲಾಗಿದೆ ಎಂದರು. ಇನ್ನೂ ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆಯಂಬ ವಿಶ್ವಾಸ ವ್ಯಕ್ತಪಡಿಸಿದರು.

ಅದೇ ರೀತಿ ಯತ್ನಾಳ್ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ ಪಾರ್ಟಿಯಲ್ಲಿ ಯಾರಿಗೂ ಧಮ್​ ಇಲ್ಲ. ಯತ್ನಾಳ್​​ಗೆ ಕೇಂದ್ರ ನಾಯಕರ ಬೆಂಬಲದಿಂದ ಸಿಎಂ ಬದಲಾವಣೆ ವಿಚಾರ ಪ್ರಸ್ತಾಪವಾಗುತ್ತಿದೆ. ಯಡಿಯೂರಪ್ಪ ಅವರ ಮೇಲೆ ನಡೆಯುತ್ತಿರುವ ಗದಾಪ್ರಹಾರ ನೋಡಿದರೆ ಸರ್ಕಾರ ಮುಂದುವರೆಯುವ ಲಕ್ಷಣ ಕಾಣಿಸುತ್ತಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.