ETV Bharat / state

ಕೊರೊನಾ ನಿಯಂತ್ರಣದ ಜೊತೆಗೆ ನೀರಿನ ಸಮಸ್ಯೆ ಕಡೆಗೂ ಗಮನ ಹರಿಸಲು ಸೂಚನೆ

ಕೊರೊನಾ ತಡೆಗಟ್ಟಲು ಮತ್ತು ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಎಲ್ಲಾ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಪ್ರವೃತ್ತರಾಗಿರುವಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಚಿಂತಾಮಣಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

water-problem-review-meeting-in-chintamani
ಪರಿಶೀಲನಾ ಸಭೆ
author img

By

Published : Apr 24, 2020, 1:53 PM IST

ಚಿಂತಾಮಣಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಒಂದು ಪಂಪು ಮತ್ತು ಮೋಟರ್​ಅನ್ನು ಜಿಲ್ಲಾ ಪಂಚಾಯಿತಿಯಿಂದ 2-3 ದಿನಗಳಲ್ಲಿ ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಬೆಳಿಗ್ಗೆಯಿಂದ ಸಂಜೆಯವರೆಗೂ ಪಂಚಾಯಿತಿ ಕೇಂದ್ರದಲ್ಲಿ ಇರಬೇಕು. ಕೋವಿಡ್​​ ಆತಂಕ ಒಂದು ಕಡೆಯಾದರೆ, ಬೇಸಿಗೆ ಆರಂಭವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಎರಡೂ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಜಾಗೃತಿ ಮೂಡಿಸಿ ದೂರುಗಳು ಬಾರದಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.

ಕೊರೊನಾ ನಿಯಂತ್ರಣ, ನೀರಿನ ಸಮಸ್ಯೆ ಕುರಿತು ಪರಿಶೀಲನಾ ಸಭೆ

ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರನ್ನು ಖಾಸಗಿ ಕೊಳವೆ ಬಾವಿಗಳು ಮತ್ತು ಟ್ಯಾಂಕರ್ ಮೂಲಕ ಪೂರೈಕೆ ಮಾಡಬೇಕು. ಖಾಸಗಿ ಕೊಳವೆ ಬಾವಿಗಳ ಮಾಲೀಕರು ಒಪ್ಪದಿದ್ದರೆ ಸರ್ಕಾರದ ಆದೇಶದಂತೆ ವಶಪಡಿಸಿಕೊಳ್ಳಬೇಕು. ನರೇಗಾ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಅಭಿವೃದ್ಧಿ ಅಧಿಕಾರಿಗಳು ಸಮಸ್ಯೆಗಳನ್ನು ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲು ಸೂಚಿಸಿದರು.

ಶಾಸಕ ಎಂ.ಕೃಷ್ಣಾರೆಡ್ಡಿ ಮಾತನಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೀರಿನ ಸಮಸ್ಯೆ ಬಗೆಹರಿಸಬೇಕು. ಗ್ರಾಮಗಳ ಜನಸಂಖ್ಯೆ, ಜಾನುವಾರುಗಳು, ಕುಡಿಯುವ ನೀರಿನ ಬೇಡಿಕೆ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.