ಚಿಕ್ಕಬಳ್ಳಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುರುಡಿ ಗ್ರಾಮದಲ್ಲಿ ನಡೆದಿದೆ.
ಪುಷ್ಪಲತಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ. ಅನಾರೋಗ್ಯ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೂಲತಃ ಮಧುಗಿರಿ ತಾಲೂಕಿನ ದಾಳವಾಟ ಗ್ರಾಮದ ನಿವಾಸಿ ಪುಷ್ಪಲತಾ ಕಳೆದ ಹತ್ತು ವರ್ಷಗಳ ಹಿಂದೆ ಕುರುಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರ ಜೊತೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗುವಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪಿಎಸ್ಐ ಮೋಹನ್ ಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.