ETV Bharat / state

ಚಿಕ್ಕಬಳ್ಳಾಪುರ: ನರ್ಸ್ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ - Worked as a contract nurse in Chikkaballapur Government District hospital

ನರ್ಸ್‌ ಅರುಣಾಗೆ ಕಳೆದ 12 ವರ್ಷಗಳ ಹಿಂದೆ ಸತ್ಯಾನಂದ ಎನ್ನುವ ವ್ಯಕ್ತಿಯ ಜೊತೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ ಮನೆಯಲ್ಲಿ ಕೌಟುಂಬಿಕ ಕಲಹವಿದ್ದ ಹಿನ್ನೆಲೆಯಲ್ಲಿ ಆಕೆಯ ಪತಿ, ಹೆಂಡತಿ ಹಾಗು ಮಕ್ಕಳನ್ನು ತೊರೆದು ಬೇರೆಡೆ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ನರ್ಸ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆ

author img

By

Published : Jan 18, 2022, 10:17 PM IST

ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣಾ ಎಂಬುವರು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ನಗರದ ತಿಮ್ಮಕ್ಕ ಲೇಔಟ್‌ನಲ್ಲಿ ನಡೆದಿದೆ.

ಅರುಣಾ ಚಿಕ್ಕಬಳ್ಳಾಪುರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿರುವ ಶಿವಮೂರ್ತಿಯ ಮೇಲೆ ಅನುಮಾನ ವ್ಯಕ್ತವಾಗಿದೆ.

ಶಿವಮೂರ್ತಿ
ಶಿವಮೂರ್ತಿ

ಅರುಣಾಗೆ ಕಳೆದ 12 ವರ್ಷಗಳ ಹಿಂದೆ ಸತ್ಯಾನಂದ ಎನ್ನುವ ವ್ಯಕ್ತಿಯ ಜೊತೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ ಮನೆಯಲ್ಲಿ ಕೌಟುಂಬಿಕ ಕಲಹವಿದ್ದ ಹಿನ್ನೆಲೆಯಲ್ಲಿ ಆಕೆಯ ಪತಿ, ಮಕ್ಕಳು ಹೆಂಡತಿಯನ್ನು ತೊರೆದು ಬೇರೆಡೆ ವಾಸವಾಗಿದ್ದರು.

ಇದನ್ನೂ ಓದಿ: ಗಂಡ-ಹೆಂಡ್ತಿ, ಇಬ್ಬರು ಮಕ್ಕಳ ಮೃತದೇಹ ಪತ್ತೆ.. ಕೊಲೆಗೈದು ಆತ್ಮಹತ್ಯೆಗೆ ಶರಣಾದ ಶಂಕೆ

ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ ವಿವಾಹಿತ ಶಿವಮೂರ್ತಿಯೊಂದಿಗೆ ಸಂಬಂಧವಿಟ್ಟುಕೊಂಡಿದ್ದು, ಕಳೆದ ರಾತ್ರಿ ಇಬ್ಬರಿಗೂ ವಾಗ್ವಾದ ನಡೆದಿದೆ. ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಕೆ ಹೇಳಿದ್ದರು ಎನ್ನಲಾಗ್ತಿದೆ.

ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.