ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ 8ನೇ ವಾರ್ಡ್ನಲ್ಲಿ ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಾಗೇಪಲ್ಲಿ ಪಟ್ಟಣದ 8ನೇ ವಾರ್ಡ್ನಲ್ಲಿ ರಾಘವೇಂದ್ರ ಎಂಬುವವರ ಮನೆಯಲ್ಲಿ ಗೃಹಿಣಿ ಮಂಜುಳಾ (46) ಸುಮಾರು 8 ತಿಂಗಳಿನಿಂದ ಬಾಡಿಗೆಗೆ ವಾಸವಾಗಿದ್ದರು. ಮನೆಯಲ್ಲಿ ಹಣಕಾಸಿನ ವಿಚಾರದಲ್ಲಿ ಮನನೊಂದು ಕಳೆದ ಎರಡು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಸದ್ಯ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿದ್ದಾರೆ.