ಚಿಕ್ಕಬಳ್ಳಾಪುರ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಈದ್ಗಾ ಬಳಿ ಪ್ರತಿಭಟನೆ ನಡೆಯಿತು. ಮುಸ್ಲಿಂ ಸಮುದಾಯದ ಮಹಿಳೆಯರು ಸೇರಿ ಹಲವು ಸಂಘಟನೆಯ ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಕೂಡಲೇ ಪೌರತ್ವ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
ಕಳೆದ ತಿಂಗಳಲ್ಲಿ ಸಿಎಎ ವಿರೋಧಿಸಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿ ಜಿಲ್ಲೆಯ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಸ್ಲಿಂ ಸಂಘಟನೆಗಳು ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದವು. ಸದ್ಯ ಇಂದು ಮಹಿಳೆಯರು ಶಾಂತಿಯುವಾಗಿ ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.