ಚಿಕ್ಕಬಳ್ಳಾಪುರ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ.
ಯೋಗೇಶ್ ( 25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.
ತೊಂಡೇಭಾವಿ ರೈಲ್ವೆ ನಿಲ್ದಾಣದ ಹೋಟೆಲ್ ಬೋಜಣ್ಣ ಅವರ ಹಿರಿಯ ಮಗ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಗೌರಿಬಿದನೂರು ನಗರ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.