ಬಾಗೇಪಲ್ಲಿ(ಚಿಕ್ಕಬಳ್ಳಾಪುರ): ಪ್ರೇಮ ವಿವಾಹವಾಗಿದ್ದರೂ ಮದುವೆಯಾದ ನಾಲ್ಕೇ ದಿನಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಪ್ರಕರಣವೊಂದು ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.
![Young woman commits suicide](https://etvbharatimages.akamaized.net/etvbharat/prod-images/13940079_thumb.jpg)
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಟ್ಟಹಳ್ಳಿ ನಿವಾಸಿ ವೀಣಾ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂಬಂಧಿ, ಯಲಹಂಕ ಬಾಗಲೂರು ಕ್ರಾಸ್ ನಿವಾಸಿ ಪುನೀತ್ ರಾಜ್ ಎಂಬಾತನನ್ನು ಪ್ರೀತಿಸಿದ್ದ ಈಕೆ ನಾಲ್ಕು ದಿನಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಳು.
ಪ್ರೇಮ ವಿವಾಹವಾಗಿದ್ದರೂ, ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗ್ತಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು? ಎಂಬಿತ್ಯಾದಿ ಖಚಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಈ ಸಂಬಂಧ ಬಾಗೇಪಲ್ಲಿ ಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣನ ಪ್ರತಿಮೆ ಕೆಡವಿದ ಕಿಡಿಗೇಡಿಗಳು: ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ