ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈವರೆಗೂ ಜಿಲ್ಲೆಯಲ್ಲಿ ಹನ್ನೊಂದು ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಹೇಳಿದ್ದಾರೆ.
ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪ್ರಕರಣಗಳು ಯಾವುದೂ ಇಲ್ಲ. ಆದರೆ ಈ 11 ಪ್ರಕರಣಗಳು ಮೊದಲು ಚಿಕಿತ್ಸೆಗಾಗಿ ನಮ್ಮ ಬಳಿ ಬಂದಿದ್ದು, ಜೀವ ಉಳಿಸೋದು ಮೊದಲ ಆದ್ಯತೆಯಾಗಿದೆ. ಹೀಗಾಗಿ ಯಾವುದೇ ರೋಗಿ ಬಂದಾಗ ಒಳ್ಳೆಯ ಚಿಕಿತ್ಸೆ ಸಿಗಬೇಕು ಎಂಬ ಕಾರಣಕ್ಕೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಶಿವಮೊಗ್ಗದ ಮೆಗ್ಗಾನ್ ಆಸ್ವತ್ರೆಗೆ ಕಳುಹಿಸಿಕೊಡುತ್ತಿದ್ದೇವೆ ಎಂದರು.
ಒಟ್ಟು 11 ಪ್ರಕರಣಗಳಲ್ಲಿ 7 ಪ್ರಕರಣಗಳು ದೃಢಪಟ್ಟಿದ್ದು, ಎಲ್ಲರೂ ಬೇರೆ ಕಡೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಇದನ್ನೂ ಓದಿ: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕರ್ನಾಟಕ ಬಾವುಟದ ಒಳ ಉಡುಪಿನ ಚಿತ್ರ ಬದಲಿಸಿದ ಅಮೆಜಾನ್