ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 110 ಜನರಿಗೆ ಕೊರೊನಾ: 93 ಮಂದಿ ಗುಣಮುಖ - Chikkamagaluru corona latest news

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಎಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದೆ. ಎಷ್ಟು ಜನರು ಗುಣಮುಖರಾಗಿದ್ದಾರೆ ಎಂಬುದರ ಕುರಿತ ಮಾಹಿತಿ ಇಲ್ಲಿದೆ.

Chikkamagaluru
Chikkamagaluru
author img

By

Published : Sep 10, 2020, 5:47 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ದಿನ 110 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,645 ಕ್ಕೆ ಏರಿಕೆಯಾಗಿದೆ.

ಇಂದಿನ ಕೋವಿಡ್ ವಿವರ:

ಚಿಕ್ಕಮಗಳೂರು ತಾಲೂಕಿನಲ್ಲಿ 30, ಕಡೂರು ತಾಲೂಕಿನಲ್ಲಿ 25, ತರೀಕೆರೆ ತಾಲೂಕಿನಲ್ಲಿ 39, ಮೂಡಿಗೆರೆ ತಾಲೂಕಿನಲ್ಲಿ 09, ಶೃಂಗೇರಿ ತಾಲೂಕಿನಲ್ಲಿ 03, ಕೊಪ್ಪ ತಾಲೂಕಿನಲ್ಲಿ 02,ಎನ್ ಆರ್ ಪುರ ತಾಲೂಕಿನಲ್ಲಿ 02 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.

ಮೃತರ ಮಾಹಿತಿ:

ಜಿಲ್ಲೆಯಲ್ಲಿಂದು ಸೋಂಕಿಗೆ ಒಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 94 ಕ್ಕೆ ಏರಿಕೆಯಾಗಿದೆ.

ಗುಣಮುಖ:

ಇಂದು ಕೊರೊನಾದಿಂದ 93 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 4,073 ಜನರು ಗುಣಮುಖರಾದಂತಾಗಿದೆ.ಜಿಲ್ಲೆಯಲ್ಲಿ ಒಟ್ಟು 1.478 ಸಕ್ರಿಯ ಪ್ರಕರಣಗಳಿವೆ.

ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.