ETV Bharat / state

ಚಿಕ್ಕಮಗಳೂರು; 111 ಮಂದಿಗೆ ಕೊರೊನಾ ಸೋಂಕು...3 ಬಲಿ

ಜಿಲ್ಲೆಯಲ್ಲಿಂದು 111 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2,622 ಮತ್ತು ಮೃತರ ಸಂಖ್ಯೆ 53ಕ್ಕೆ ತಲುಪಿದೆ.

Chickmagaluru covid case's
Chickmagaluru covid case's
author img

By

Published : Aug 20, 2020, 6:24 PM IST

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ಸೋಂಕಿಗೆ ಮಲೆನಾಡಿನ ಮೂವರು ಮೃತಪಟ್ಟಿದ್ದಾರೆ. ಜೊತೆಗೆ 111 ಜನರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ 43, ಕಡೂರು- 31, ತರೀಕೆರೆ- 14, ಮೂಡಿಗೆರೆ 8, ಕೊಪ್ಪ 2, ಶೃಂಗೇರಿ 1, ಎನ್ ಆರ್ ಪುರ 2, ಅಜ್ಜಂಪುರದಲ್ಲಿ 10 ಸೋಂಕು ಪ್ರಕರಣಗಳು ಇಂದು ವರದಿಯಾಗುವ ಮೂಲಕ ಸೋಂಕಿತರ ಸಂಖ್ಯೆ 2,622ಕ್ಕೆ ಏರಿಕೆಯಾಗಿದೆ. ಸೋಂಕಿತರು ವಾಸಿಸುತ್ತಿದ್ದ ಪ್ರದೇಶವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

ಇನ್ನೂ ಸೋಂಕಿಗೆ 3 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 62 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟು 1,663 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸದ್ಯ 906 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.